ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 18 ಜನವರಿ 2020
ಕೊಡಚಾದ್ರಿ ಮತ್ತು ಕೊಲ್ಲೂರು ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೇಬಲ್ ಕಾರ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ ಸುಮಾರು 32 ಕಿ.ಮೀ. ದೂರದ ಅಂತರವಿದ್ದು, 11ಕಿ.ಮೀ. ಕೇಬಲ್ ಕಾರ್ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ ಅಲ್ಲದೆ ಸಮಯದ ಉಳಿತಾಯವಾಗಲಿದೆ ಎಂದರು.
ಈ ಭಾಗದ ಪ್ರಕೃತಿ ಸೌಂದರ್ಯಕ್ಕೆ ಸ್ವಲ್ಪವು ತೊಂದರೆ ಆಗದೆ ಅಭಿವೃದ್ಧಿ ಕಾರ್ಯ ನಡೆಸಲು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ, ಪರಿಸರ, ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು, ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಸಂಸದರ ರಾಘವೇಮದ್ರ ತಿಳಿಸಿದರು.
1200 ಕೋಟಿ ರೂ. ಯೋಜನೆ
ಕೇಬಲ್ ಕಾರು ಯೋಜನೆಗೆ 1200 ಕೋಟಿ ರೂ. ಅಂದಾಜು ವೆಚ್ಚ ತಗಲುವ ಸಾಧ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಗತ್ಯ ಸಹಕಾರ ನೀಡಿದಲ್ಲಿ, ಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಬೆಂಗಳೂರು ಮೀನಸ್ ಅಡ್ವೆಂಚರ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಜೀರ್ ಎ.ಭಟ್ ಅವರು ಹೇಳಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ, ಉಡುತಡಿ ಅಭಿವೃದ್ಧಿಗೆ ಸಂಬಂಧಿಸಿದ ಅಲ್ಕನ್ ಕನ್ಸ್’ಟ್ರಕ್ಷನ್ಸ್ ಸಂಸ್ಥೆಯ ವಿನಾಯಕ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ರವಿ ಮುಂತಾದವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]