SHIVAMOGGA LIVE NEWS | 2 FEBRUARY 2023
SHIMOGA | ನಕಲಿ ದಾಖಲೆ ನೀಡಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್ಗಳನ್ನು ರದ್ದುಪಡಿಸಲು (Card Cancel) ಜಿಲ್ಲೆಯಲ್ಲಿ ಫೆ.25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಕಾರ್ಮಿಕರಲ್ಲದವರು ಎಲ್ಲಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹೋಗಿ ಮೂಲ ಗುರುತಿನ ಚೀಟಿ ಸಲ್ಲಿಸಬೇಕು. ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಮತ್ತು ಸೌಲಭ್ಯ ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಕಾರ್ಮಿಕರಿಗೆ ಉದ್ಯೋಗ ಪ್ರಮಾಣ ಪತ್ರ ನೀಡುವ ವ್ಯಕ್ತಿ, ಸಂಸ್ಥೆ, ಪ್ರಾಧಿಕಾರ ಸಂಘಟನೆಗಳ ವಿರುದ್ಧವು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ ಎಚ್ಚರಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



