ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021
ರಸಗೊಬ್ಬರ ಮಾರಾಟಗಾರರು ನಿಗದಿಗಿಂತಲೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ರೈತರು ದೂರು ನೀಡಬಹುದು ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.
ರೈತರ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಕೆಯ ಕಚೇರಿಯಲ್ಲಿ ದೂರು ದಾಖಲಿಸಬಹುದಾಗಿದೆ.
2021ರ ಏಪ್ರಿಲ್ 01 ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ, ಲಭ್ಯವಿರುವ ದಾಸ್ತಾನಿನ ರಸಗೊಬ್ಬರ ಚೀಲಗಳ ಮೇಲೆ ಮುದ್ರಿತವಾಗಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಈ ರೀತಿ ಮಾರಾಟ ಮಾಡಿದರೆ ರಸಗೊಬ್ಬರ ನಿಯಂತ್ರಣ ಆದೇಶ 1985ರ ಅನ್ವಯ ಕಾನೂನು ರೀತಿ ವಂಚನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422