ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತಿನಿಂದ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ದೇಶದಲ್ಲೆಲ್ಲೂ ಕೋಳಿ ಮಾಂಸ ಮಾರಾಟಕ್ಕೆ ನಿಷೇಧ ಇರಲಿಲ್ಲ. ಹಕ್ಕಿ ಜ್ವರ ಭೀತಿಯಿಂದ ದಾವಣಗೆರೆ ಜಿಲ್ಲೆಯ ಬನ್ನಿಕೋಡು ಗ್ರಾಮದಲ್ಲಿ ಸಾವಿರಾರು ಕೋಳಿಗಳನ್ನು ಗುಂಡಿ ತೆಗೆದು ಹೂಳಲಾಗಿತ್ತು. ಈ ಹಿನ್ನೆಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಕೋಳಿ ಮಾರಾಟ ನಿಷೇಧಿಸಲಾಗಿತ್ತು ಎಂದರು.
ಶಿವಮೊಗ್ಗದಲ್ಲಿ ಹಕ್ಕಿ ಜ್ವರ ಕಂಟ್ರೋಲ್’ನಲ್ಲಿದೆ
ಕೋಳಿ ಜ್ವರ ಶಿವಮೊಗ್ಗದಲ್ಲಿ ಸಂಪೂರ್ಣ ಕಂಟ್ರೋಲ್’ನಲ್ಲಿದೆ. ಹಾಗಾಗಿ ಇನ್ಮುಂದೆ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟಕ್ಕೆ ನಿಷೇಧ ಹೇರಲು ಸಾಧ್ಯವಿಲ್ಲ. ಆದ್ದರಿಂದ ಕೋಳಿ ಮಾಂಸ ಮಾರಾಟಕ್ಕೆ ಇವತ್ತಿನಿಂದಲೇ ಅವಕಾಶವಿದೆ. ಆದರೆ ಹೆಚ್ಚು ದರಕ್ಕೆ ಮಾರಾಟ ಮಾಡುವ ಕುರಿತು ತಿಳಿದು ಬಂದರೆ ದರ ನಿಗದಿ ಕುರಿತು ಯೋಚಿಸೋಣ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422