ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 FEBRUARY 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕು ದಿನ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರವರಿ 14 ರಿಂದ 17ರವರೆಗೆ ಸಿಎಂ ಪ್ರವಾಸ ಕೈಗೊಂಡಿದ್ದಾರೆ.
ಎಲ್ಲೆಲ್ಲಿಗೆ ಸಿಎಂ ಭೇಟಿ?
ಫೆಬ್ರವರಿ 14ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ದಾವಣಗರೆ ಜಿಲ್ಲೆಯ ನ್ಯಾಮತಿಯ ಸುರಗೊಂಡನಕೊಪ್ಪಕ್ಕೆ ಆಗಮಿಸುವರು. ಸಂತ ಸೇವಾಲಾಲ್ ಅವರ 282ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 5ಕ್ಕೆ ಶಿಕಾರಿಪುರಕ್ಕೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ, ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕಾರಿಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 15ರಂದು ಬೆಳಗ್ಗೆ 10.15ಕ್ಕೆ ಶಿಕಾರಿಪುರದಿಂದ ಹೊರಟು ಬೆಳಗ್ಗೆ 11ಕ್ಕೆ ಶಿವಮೊಗ್ಗದ ಪ್ರವಾಸಿ ಮಂದಿರದ ಹೆಲಿಪ್ಯಾಡ್ಗೆ ಆಗಮಿಸಿ ವರ್ಚುವಲ್ ಮೂಲಕ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ (ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ವರ್ಚುವಲ್ ಮುಖಾಂತರ ಉದ್ಘಾಟನೆ) ಭಾಗವಹಿಸಲಿದ್ದಾರೆ. ಶಿವಮೊಗ್ಗ – ಭದ್ರಾವತಿಯ ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಆಗಲಿದೆ. ಬಳಿಕ ವಿವಿಧ ಸ್ಥಳೀಯ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದಾರೆ.
ಫೆ.16ರಂದು ಬೆಳಗ್ಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ.
ಫೆಬ್ರವರಿ 17ರಂದು ಬೆಳಗ್ಗೆ 10.45ಕ್ಕೆ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವರು. 11.30ಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಿದ್ದು, ಮಧ್ಯಾಹ್ನ 12ಕ್ಕೆ ಈಡಿಗರ ಭವನ ಉದ್ಘಾಟಿಸುವರು. ಮಧ್ಯಾಹ್ನ 1ಕ್ಕೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿವಿ ಮತ್ತು ರಾಮೇನಕೊಪ್ಪದ ವ್ಯಾಲ್ಯೂ ಫುಡ್ ಪ್ರಾಡೆಕ್ಟ್ ಲಿಮಿಟೆಡ್ನ ಸಹಯೋಗದಲ್ಲಿ ಸಹ್ಯಾದ್ರಿ ನೋನಿ ಚಹದ ತಂತ್ರಜ್ಞಾನ ವರ್ಗಾವಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 2.30ಕ್ಕೆ ಹೊಳಲೂರಿನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ ಉದ್ಘಾಟನೆ. ಮಧ್ಯಾಹ್ನ 3ಕ್ಕೆ ಭದ್ರಾವತಿ ತಾಲೂಕು ಆನವೇರಿಯಲ್ಲಿ ಮಾರಮ್ಮ ದೇವಸ್ಥಾನದ ಉದ್ಘಾಟನೆ. 3.15ಕ್ಕೆ ಗುಡುಮಗಟ್ಟೆಯಲ್ಲಿ ಈಶ್ವರ ದೇವಸ್ಥಾನ ಉದ್ಘಾಟಸಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳಸುವರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422