ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 AUGUST 2023
BENGALURU : ಶಿವಮೊಗ್ಗ ಜಿಲ್ಲೆಯ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಇವತ್ತು ಮಹತ್ವದ ಸಭೆ (Meeting) ನಡೆಸಿದರು. ಲೋಕಸಭೆ (Loksabha) ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮುಖಂಡರ ಪಕ್ಷ ಸೇರ್ಪಡೆ, ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆಯಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ನಾಲ್ಕು ಪ್ರಮುಖ ವಿಷಯಗಳ ಕುರಿತು ಚರ್ಚೆ
ವಿಷಯ 1 : ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತು ಚುನಾವಣೆ
ಮುಂಬರುವ ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಈ ವೇಳೆ ಲೋಕಸಭೆ ಚುನಾವಣೆ ಅಭ್ಯರ್ಥಿಯ ಹೆಸರನ್ನು ಶೀಘ್ರ ಪ್ರಕಟಿಸುವಂತೆ ಸಚಿವರು ಮತ್ತು ಶಾಸಕರು ಮನವಿ ಮಾಡಿದರು. ಗೀತಾ ಶಿವರಾಜ್ ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದಾರೆ. ಅಭ್ಯರ್ಥಿಯ ಹೆಸರನ್ನು ಬೇಗ ಅಂತಿಮಗೊಳಿಸಿ ಎಂದು ಶಾಸಕರು ತಿಳಿಸಿದರು. ಲಿಂಗಾಯತ ಅಥವಾ ಈಡಿಗ ಸಮುದಾಯದವರನ್ನು ಅಭ್ಯರ್ಥಿಯಾಗಿಸಿದರೆ ಅನುಕೂಲ ಎಂಬ ಅಭಿಪ್ರಾಯ ಕೇಳಿ ಬಂತು. ಇನ್ನು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿದ್ದು ಎಲ್ಲರು ಒಗ್ಗಟ್ಟಿನಿಂದ ಎದುರಿಸಬೇಕು ಎಂದು ಸಿಎಂ ಸೂಚಿಸಿದರು.
ವಿಷಯ 2 : ಜಿಲ್ಲೆಯ ಅಭಿವೃದ್ಧಿ ಯೋಜನೆಗಳು
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಯಿತು. ಈ ವೇಳೆ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – 3 ತಿಂಗಳಿಂದ ಸೇವೆ ಇಲ್ಲ, ತಪ್ಪಲಿಲ್ಲ ಶರಾವತಿ ಹಿನ್ನೀರು ಭಾಗದ ಜನರ ಅಲೆದಾಟ, ಇನ್ನಾದರೂ ಕಣ್ಣು ತೆರೆಯುತ್ತಾ ಆಡಳಿತ?
ವಿಷಯ 3 : ಮನೆ ಮನೆಗೆ ಗ್ಯಾರಂಟಿ ಯೋಜನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಭೆಯಲ್ಲಿ ಚರ್ಚಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮರ್ಪಕವಾಗಿ ಆಗಬೇಕು. ಮನೆ ಮನೆಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಷಯ 4 : ಮುಖಂಡರ ಪಕ್ಷ ಸೇರ್ಪಡೆ
ವಿವಿಧ ರಾಜಕೀಯ ಪಕ್ಷಗಳಿಂದ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲು ಬಯಸಿದ್ದಾರೆ. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ ಗೌಡ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ ಕುರಿತು ಸಹ ಚರ್ಚೆಯಾಗಿದೆ. ಸಿಎಂ ಕೂಡ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪಕ್ಷಕ್ಕೆ ಬರುವವರ ಕುರಿತು ಮುಖಂಡರ ಜೊತೆ ಚರ್ಚೆ ನಡೆಸಿ ಅಂತಿಮಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422