ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಜೂನ್ 1ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ಅಂದು ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದಿಂದ (District Administration) ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರ್ನಾಟಕ ಪಬ್ಲಿಕ್ ಶಾಲೆ (Karnataka Public School / KPS Scheme) ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ (District Collector / Deputy Commissioner) ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ (DC Office Hall) ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ (Preparatory meeting) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಕ ಬದಲಾವಣೆಯ ಪ್ರತಿಬಿಂಬವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಬಸ್, ಊಟದ ವ್ಯವಸ್ಥೆ
ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಸಹಕರಿಸಬೇಕು ಎಂದು ತಿಳಿಸಿದರು.
ಹಕ್ಕುಪತ್ರ ವಿತರಣೆ
ಕಂದಾಯ ಇಲಾಖೆಯ (Revenue Department) ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು (Title deeds), ಪಿಂಚಣಿ (Government pension) ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಇದೇ ವೇಳೆ ಫಲಾನುಭವಿಗಳಿಗೆ (Beneficiaries) ವಿತರಣೆ ಮಾಡಲಿದ್ದಾರೆ.

ಅಂಗವಿಕಲರಿಗೆ ಸವಲತ್ತುಗಳು, ಕಾರ್ಮಿಕರಿಗೆ ಸೌಲಭ್ಯ, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು ಹಾಗೂ ಸಹಾಯಧನ ಆಧಾರಿತ ಸಾಲ-ಸೌಲಭ್ಯಗಳ (Subsidized loans) ವಿತರಣೆ ಇದೇ ವೇಳೆ ನಡೆಯಲಿದೆ ಎಂದರು.
ಕಾರ್ಯಕ್ರಮದ ನೇತೃತ್ವವನ್ನು ಉಪ ಮುಖ್ಯಮಂತ್ರಿ (Deputy Chief Minister) ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ (District In-charge Minister) ಮಧು ಬಂಗಾರಪ್ಪ ವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ (Zilla Panchayat CEO) ಎನ್. ಹೇಮಂತ್, ಎಸ್‌ಪಿ (Superintendent of Police) ಬಿ. ನಿಖಿಲ್, ಎಡಿಸಿ (ADC) ವಿ. ಅಭಿಷೇಕ್ ಉಪಸ್ಥಿತರಿದ್ದರು.
