ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020
ಕರೋನ ಕಾಣಿಸಿಕೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೆ ಮೊದಲ ಬಾರಿಗೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸೆಪ್ಟೆಂಬರ್ 2ರಂದು ಸಿಎಂ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಸಿಎಂ ಭೇಟಿ ಎಲ್ಲಿಗೆ? ಕಾರಣವೇನು?
ಸೆ.2ರಂದು ಬೆಳಗ್ಗೆ 11ಕ್ಕೆ ಬೆಂಗಳೂರು ಹೆಚ್‍ಎಎಲ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಸಿಎಂ, ಮಧ್ಯಾಹ್ನ 12.15ಕ್ಕೆ ಭದ್ರಾ ಜಲಾಶಯದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ತುಂಬಿದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಹೆಲಿಕಾಪ್ಟರ್ ಮೂಲಕವೇ ಅಜ್ಜಂಪುರಕ್ಕೆ ತೆರಳಲಿದ್ದಾರೆ. ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಆಗಮಿಸುವ ಆಮಂತ್ರಿತರಿಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.
ಕರೋನ ಬಳಿಕ ಮೊದಲ ಭೇಟಿ
ರಾಜ್ಯದಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಬಳಿ ಸಿಎಂ ಯಡಿಯೂರಪ್ಪ ಅವರು ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಗದಿಯಾದರೂ ವಿವಿಧ ಕಾರಣಕ್ಕೆ ಸಿಎಂ ಶಿವಮೊಗ್ಗಕ್ಕೆ ಬರಲು ಸಾಧ್ಯವಾಗಿರಲಿಲ್ಲ.
https://www.facebook.com/liveshivamogga/videos/314546413130946/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422