ಫೆಬ್ರವರಿ 28ಕ್ಕೆ ಶಿವಮೊಗ್ಗಕ್ಕೆ ಸಿಎಂ, ಮೂಗೂರು ಯೋಜನೆ ಲೋಕಾರ್ಪಣೆ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿ ಆಗ್ತಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರವರಿ 28ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಫೆಬ್ರವರಿ 28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಸೊರಬದ ಆನವಟ್ಟಿಗೆ ಆಗಮಿಸಲಿದ್ದಾರೆ.

ಆನವಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮೂಗುರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಶಿಕಾರಿಪುರಕ್ಕೆ ಭೇಟಿ ನೀಡಲಿರುವ ಯಡಿಯೂರಪ್ಪ ಅವರು ಸಂಜೆ 4 ಗಂಟೆಗೆ ಟಿಎಪಿಸಿಎಂಎಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.50ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‍ಗೆ ಸಿಎಂ ಆಗಮಿಸಲಿದ್ದಾರೆ. ಇಲ್ಲಿನ ಮೆಡಿಕಲ್ ಕಾಲೇಜು ಅಸೋಸಿಯೇಷನ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಗೆಜ್ಜೇನಹಳ್ಳಿಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಫ್ರೀಡಂ ಪಾರ್ಕ್‍ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯದ ಭಾಗಶಃ ಅನುಷ್ಠಾನ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಮ್ಮೊಲುಮೆ ಅಭಿಮಾನದ ಅಭಿನಂದನಾ  ಸಮಾರಂಭದಲ್ಲಿ  ಭಾಗಿಯಾಗಲಿದ್ದಾರೆ.

ಮಾರ್ಚ್ 1ರಂದು ಬೆಳಗ್ಗೆ 9 ಗಂಟೆಗೆ ಎನ್‍ಡಿವಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment