ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 18ರಿಂದ 20ರವರೆಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಅ.18ರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಅ.19ರ ಬೆಳಗ್ಗೆ 11ಕ್ಕೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಸಬಾ ಏತ ನೀರಾವರಿ ಮತ್ತು ಉಡುತಡಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.
ಅ.20ರ ಬೆಳಗ್ಗೆ 11ಕ್ಕೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಿಎಂ ಸವಲತ್ತು ವಿತರಿಸಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]