ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಬೆಂಗಳೂರು: ರಾಜ್ಯಾದ್ಯಂತ 474 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (KPS) ಉನ್ನತೀಕರಿಸಿ ಹೆಚ್ಚುವರಿ ಮೂಲಸೌಲಭ್ಯ ಒದಗಿಸಲು ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳನ್ನು ಉನ್ನತೀಕರಿಸಿ ಕೆಪಿಎಸ್ ಶಾಲೆಗಳಾಗಿ ಪರಿವರ್ತಿಸಲಾಗುತ್ತದೆ.
ಯಾವ್ಯಾವ ಶಾಲೆಗಳು? ಇಲ್ಲಿದೆ ಲಿಸ್ಟ್
ಭದ್ರಾವತಿ: ಅರಳಿಹಳ್ಳಿಯ ಸರ್ಕಾರಿ ಹೈಸ್ಕೂಲ್, ದೊಣಬಘಟ್ಟದ ಉರ್ದು ಸರ್ಕಾರಿ ಪಿಯು ಕಾಲೇಜು, ಹಳೆನಗರದ ಸಂಚಿಹೊನ್ನಮ್ಮ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಹೊಳೆಹೊನ್ನೂರು ಸರ್ಕಾರಿ ಪಿಯು ಕಾಲೇಜು.
ಹೊಸನಗರ: ರಿಪ್ಪನ್‌ಪೇಟೆಯ ಸರ್ಕಾರಿ ಪಿಯು ಕಾಲೇಜು
ಸಾಗರ: ಬ್ಯಾಕೋಡಿನ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ತ್ಯಾಗರ್ತಿಯ ಸರ್ಕಾರಿ ಪ್ರೌಢಶಾಲೆ.

ಶಿಕಾರಿಪುರ: ಹೊಸೂರು ಸರ್ಕಾರಿ ಪಿಯು ಕಾಲೇಜು ಪ್ರೌಢಶಾಲೆ ವಿಭಾಗ, ಈಸೂರು ಸರ್ಕಾರಿ ಪಿಯು ಕಾಲೇಜು ಪ್ರೌಢಶಾಲೆ ವಿಭಾಗ.
ಶಿವಮೊಗ್ಗ: ಹಾಯ್‌ಹೊಳೆಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ದುರ್ಗಿಗುಡಿಯ ಹಿರಿಯ ಪ್ರಾಥಮಿಕ ಶಾಲೆ (ಇಂಗ್ಲೀಷ್), ಮಿಳಘಟ್ಟದ ಹಿರಿಯ ಪ್ರಾಥಮಿಕ ಶಾಲೆ.
ಸೊರಬ: ಜಡೆಯ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಉಳುವಿಯ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಅಂಕರವಳ್ಳಿಯ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಚಿತ್ತೂರಿನ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ.
ಸಾಗರ: ಸಿರಿವಂತೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜು.
ತೀರ್ಥಹಳ್ಳಿ: ತೀರ್ಥಹಳ್ಳಿಯ ಸರ್ಕಾರಿ ಪಿಯು ಕಾಲೇಜು, ಮೇಗರವಳ್ಳಿಯ ಸರ್ಕಾರಿ ಪ್ರೌಢಶಾಲೆ.
ಇದನ್ನೂ ಓದಿ » ₹99,999ಕ್ಕೆ ತಲುಪಿದ ಅಡಿಕೆ ರೇಟ್ | 15 ಅಕ್ಟೋಬರ್ 2025 | ಇವತ್ತಿನ ಅಡಿಕೆ ಧಾರಣೆ
KPS

