ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 DECEMBER 2022
ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ (admission) ಡಿ.17ರಂದು ನಿಗದಿಯಾಗಿದ್ದ ಕೌನ್ಸಿಲಿಂಗ್ ಮುಂದೂಡಲಾಗಿದೆ. ಡಿ.19 ಮತ್ತು ಡಿ.20ರಂದು ಕೌನ್ಸಿಲಿಂಗ್ ನಡೆಯಲಿದೆ ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
2022-23 ನೇ ಶೈಕ್ಷಣಿಕ ಸಾಲಿನ ಎಲ್ಲ ಸ್ನಾತಕೋತ್ತರ ಕೇಂದ್ರಗಳು ಮತ್ತು ವಿಭಾಗಗಳ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸುಗಳ ಪ್ರವೇಶಾತಿಗಾಗಿ ಡಿ. 16ರಂದು ಮೆರಿಟ್ ಆಧರಿತ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಡಿ.19 ರಂದು ಮೆರಿಟ್ ಹಾಗೂ ಸ್ಪೆಷಲ್ ಕೆಟಗರಿ ಸೀಟುಗಳ ಪ್ರವೇಶಾತಿ (admission) ನಡೆಯಲಿದೆ. ಡಿ. 20 ರಂದು ಮೆರಿಟ್ ಕಮ್ ಪೇಮೆಂಟ್ ಸೀಟುಗಳ ಪ್ರವೇಶಾತಿ ನಡೆಯಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದ ಕಥೆ ಈಗ ಅಮೆಜಾನ್ ಪ್ರೈಮ್‌ನಲ್ಲಿ ವೆಬ್ ಸೀರಿಸ್, ಡಿ.16ಕ್ಕೆ 8 ಎಪಿಸೋಡ್ ರಿಲೀಸ್
ಈ ಸಾಲಿನ ಪ್ರವೇಶಾತಿಯನ್ನು ಡಿಸೆಂಬರ್ 17ರಂದು ನಡೆಸುವುದಾಗಿ ಈ ಮೊದಲು ತಿಳಿಸಲಾಗಿತ್ತು. ಡಿ.17ರಂದು ರಾಜ್ಯಾದ್ಯಂತ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ವಿದ್ಯಾರ್ಥಿಗಳ ಮುಷ್ಕರ ನಡಸಲಾಗುತ್ತಿದೆ. ಆದ್ದರಿಂದ ಕೌನ್ಸಿಲಿಂಗ್ ದಿನಾಂಕಗಳನ್ನು ಮುಂದೂಡಲಾಗಿದೆ ಎಂದು ಕುವೆಂಪು ವಿವಿ ಪ್ರಕಟಣೆ ತಿಳಿಸಿದೆ.