ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JUNE 2024
EDUCATION NEWS : ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿವೆ. ಶಿಕ್ಷಕರು, ಶಾಲೆ ಆಡಳಿತ ಮಂಡಳಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಿರುವುದು ವರದಿಯಾಗುತ್ತಿವೆ. ಶಿವಮೊಗ್ಗದ ಶಾಲೆಯೊಂದರ ಆಡಳಿತ ಮಂಡಳಿ ಮೊದಲ ದಿನ (First Day) ವಿಶೇಷ ಪೂಜೆ ನೆರವೇರಿಸಿ, ಪೋಷಕರಿಂದ ಅಕ್ಷರಭ್ಯಾಸ ಮಾಡಿಸಿದೆ.
ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ ಮೊದಲ ದಿನ ಸರಸ್ವತಿ ಪೂಜೆ ನೆರವೇರಿಸಲಾಯಿತು. ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಸಂಕಲ್ಪ ಮಾಡಿಸಲಾಗಿತ್ತು. ಅದರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಪ್ರತಿ ಮಗುವಿನ ಹಸ್ತಪ್ರತಿ ತೆಗೆದು ಪೋಷಕರಿಗೆ ಉಡುಗೊರೆಯಾಗಿ ನೀಡಲಾಯಿತು.
ಇದನ್ನೂ ಓದಿ – ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ
ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಸಿಒಒ ಸುಮಂತ್, ಸೌಲಭ್ಯ ವ್ಯವಸ್ಥಾಪಕ ವಿಜಯ್ ಕುಮಾರ್, ಪೋಷಕರು, ಶಿಕ್ಷಕರು, ಶಾಲೆ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು






