SHIVAMOGGA LIVE NEWS | 13 ಮಾರ್ಚ್ 2022
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿ.ಜಿ.ಡಿಪ್ಲೋಮಾ ಕೋರ್ಸ್’ಗಳ ಪ್ರವೇಶಾತಿ ಪ್ರಾರಂಭವಾಗಿದೆ.
ಬಿಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಲ್, ಐಎಸ್ಸಿ ಪದವಿ ಹಾಗೂ ಎಂ.ಎ, ಎಂ.ಕಾಂ, ಎಂ.ಎಲ್, ಐಎಸ್ಸಿ ಮತ್ತು ಎಂ.ಎಸ್ಸಿ ಸ್ನಾತಕೋತ್ತರ ಪದವಿ ಹಾಗೂ ಪಿ.ಜಿ.ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ಪಡೆಯಲು ಮಾ.31 ಕೆಡೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ಭರ್ತಿ ಮಾಡಿ, ಸಾಗರ ರಸ್ತೆ, ಆಲ್ಕೊಳ ಸರ್ಕಲ್ ಹತ್ತಿರವಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.
ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಹಾಗೂ ಮಹಿಳಾ ಬಿ.ಪಿ.ಎಲ್ ವಿದ್ಯಾರ್ಥಿನಿಯರಿಗೆ ಶೇ.15 ಶುಲ್ಕ ವಿನಾಯಿತಿ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಿವಿ ಯ ವೆಬ್ಸೈಟ್ www.ksoumysore.karnataka.gov.in ಇಲ್ಲಿ ಪಡೆಯಬಹುದು. ಹಾಗೂ ದೂರವಾಣಿ ಸಂಖ್ಯೆ: 08182-250376, 9164467131, 9739803295, 9480765905 ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200