ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವ (Convocation) ಜೂನ್ ತಿಂಗಳಲ್ಲಿ ಜರುಗಲಿದೆ. ಈ ವೇಳೆ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.
ಆಗಸ್ಟ್/ಸೆಪ್ಟೆಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಜನವರಿ/ಫೆಬ್ರುವರಿ-2025ರ ಬಿ.ಇಡಿ ಹಾಗೂ 2025 ಜನವರಿ 31 ಮತ್ತು ನಂತರದಲ್ಲಿ ಪಿಎಚ್.ಡಿ ಪದವಿಗೆ ಪ್ರಕಟಣೆ ಹೊರಡಿಸಲಾದ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.
ಘಟಿಕೋತ್ಸವದಲ್ಲಿ ರ‍್ಯಾಂಕ್/ ಸ್ವರ್ಣ ಪದಕ/ನಗದು ಬಹುಮಾನ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದು, ಮೇಲ್ಕಂಡ ವರ್ಷದಲ್ಲಿ ಪ್ರವೇಶ ಶುಲ್ಕದ ಜೊತೆಗೆ ಘಟಿಕೋತ್ಸವ ಶುಲ್ಕ ಪಾವತಿಸಿರುವ ದೂರ ಶಿಕ್ಷಣದ ವಿದ್ಯಾರ್ಥಿಗಳು ಹಾಗೂ ರೆಗ್ಯೂಲರ್ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಹಿಂದಿನ ವರ್ಷಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ವಿಶ್ವವಿದ್ಯಾಲಯದ ವೆಬ್‌ಸೈಟ್ ವಿಳಾಸ www.kuvempu.ac.in ನಲ್ಲಿ ವಿದ್ಯಾರ್ಥಿಗಳು ಎಕ್ಸಾಮಿನೇಷನ್‌ಗೆ ಲಾಗಿನ್ ಆಗಿ ಕಾನ್ವೊಕೇಷನ್ ಅಪ್ಲಿಕೇಷನ್ ಎಂಬ ಲಿಂಕ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಇ–ಅರ್ಜಿಯನ್ನು ಅಪ್‌ಲೋಡ್ ಮಾಡುವ ಕುರಿತ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.
ಪಿಎಚ್.ಡಿ, ಪದವೀಧರರು ವಿಶ್ವವಿದ್ಯಾಲಯದ ವೆಬ್‌ಸೈಟ್ www.kuvempu.ac.in ಮೂಲಕ ತಮಗೆ ನೀಡಲಾದ ನೋಂದಣಿ ಸಂಖ್ಯೆ ಬಳಸಿಕೊಂಡು ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 2 ಕೊನೆಯ ದಿನ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್, ಮೌಲ್ಯಮಾಪನ ಕಾರ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ-577451, ಇ-ಮೇಲ್:[email protected] ಹಾಗೂ ಮೊಬೈಲ್ ಸಂಖ್ಯೆ -8183098138 ಗೆ ಸಂಪರ್ಕಿಸಬಹುದು ಎಂದು ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200