ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ; ಜೂನ್ 12 ಕೊನೆಯ ದಿನ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (Agricultural University) ಅಧೀನದಲ್ಲಿರುವ ಬ್ರಹ್ಮಾವರ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ವರ್ಷದ 2 ವರ್ಷಗಳ ಕನ್ನಡ ಮಾಧ್ಯಮದ ಕೃಷಿ ಡಿಪ್ಲೊಮಾ ಕೋರ್ಸ್ (Diploma in Agriculture) ಪ್ರವೇಶಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳೇನು?

  • ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಸಿಸಿರಬೇಕು. ಸಾಮಾನ್ಯ ವರ್ಗದವರು ಕನಿಷ್ಠ ಶೇ. 45 ಅಂಕ ಹಾಗೂ ಪ.ಜಾ/ಪ.ಪಂ/ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಜೂನ್ 12, 2026 ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು.
  • ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ ಪ್ರವೇಶಾತಿಗೆ ಮೀಸಲಿಡಲಾಗಿದೆ (Reservation for Farmers Children).
  • ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ ₹500 ಹಾಗೂ ಪ.ಜಾ/ಪ.ಪಂ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ₹250 ನಿಗದಿಪಡಿಸಲಾಗಿದೆ.
  • ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿಡಿಯನ್ನು ‘Comptroller, KSNUAHS, Shivamogga – 577412’ ಇವರ ಹೆಸರಿನಲ್ಲಿ ಪಡೆಯಬೇಕು.

ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿದ ಅರ್ಜಿಗಳನ್ನು ಭರ್ತಿ ಮಾಡಿ, ಡಿಡಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ಜೂನ್ 12 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ (Postal Application) ಸಲ್ಲಿಸಬೇಕು.

010521-Agriculture-University-Shimoga-1.jpg

ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು (Roster System) ಅಳವಡಿಸಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ ಕುರಿತು ಕುಲಸಚಿವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.uahs.edu.in ಅನ್ನು ಸಂಪರ್ಕಿಸಲು ಕೋರಲಾಗಿದೆ.

ಹೆಚ್ಚಿನ Shimoga News, Shivamogga News ಮತ್ತು COLLEGE NEWS ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published :

© ಶಿವಮೊಗ್ಗ ಲೈವ್‌ : ಮೇ 16, 2026