ಕುವೆಂಪು ವಿವಿ ಅಕಾಡೆಮಿಕ್‌ ಕೌನ್ಸಿಲ್‌ಗೆ ಅರುಣ್‌, ಸೂರಜ್‌ ರೇವಣ್ಣ, ಏನಿದು ಕೌನ್ಸಿಲ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JANUARY 2024

EDUCATION NEWS : ಕುವೆಂಪು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಇಬ್ಬರು ಶಾಸಕರನ್ನು ನೇಮಿಸಲಾಗಿದೆ. ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್.ಅರುಣ್‌ ಮತ್ತು ಸೂರಜ್‌ ರೇವಣ್ಣ ಅವರನ್ನು ನೇಮಿಸಿ ಸಭಾಪತಿ ಅವರು ನಾಮ ನಿರ್ದೇಶನ ಮಾಡಿದ್ದಾರೆ.

ಈ ಸಂಬಂಧ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರು ಕುವೆಂಪು ವಿವಿ ಕುಲ ಸಚಿವರಿಗೆ ಆದೇಶ ಪ್ರತಿ ರವಾನಿಸಿದ್ದಾರೆ.

ಏನಿದು ವಿದ್ಯಾವಿಷಯಕ ಪರಿಷತ್ತು?

ವಿಶ್ವವಿದ್ಯಾಲಯಗಳ ಶೈಕ್ಷಣಿಕ ಚುಟುವಟಿಕೆ ಕುರಿತು ಶಾಸನಗಳು, ಆದೇಶಗಳು, ನಿಯಮಗಳನ್ನು ರಚಿಸಲು ವಿದ್ಯಾವಿಷಯಕ ಪರಿಷತ್ತು (ಅಕಾಡೆಮಿಕ್‌ ಕೌನ್ಸಿಲ್)‌ ರಚಿಸಲಾಗುತ್ತದೆ. ಪ್ರತಿ ವಿಶ್ವವಿದ್ಯಾಲಯಕ್ಕು ಪ್ರತ್ಯೇಕ ಅಕಾಡೆಮಿಕ್‌ ಕೌನ್ಸಿಲ್‌ ‍ಸ್ಥಾಪಿಸಲಾಗಿರುತ್ತದೆ. ವಿವಿಯ ಕುಲಪತಿ ವಿದ್ಯಾವಿಷಯಕ ಪರಿಷತ್ತಿನ ಅಧ್ಯಕ್ಷ, ಕುಲಸಚಿವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಳಿದಂತೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಸಕರು, ಕಾಲೇಜುಗಳ ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು ಸೇರಿದಂತೆ ಹಲವರು ಇದರ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಹೆಡೆ ಎತ್ತಿದ ನಾಗರ ಹಾವು

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment