ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021
ಎಟಿಎನ್ಸಿಸಿ ಸಂಜೆ ಕಾಲೇಜು ವಿದ್ಯಾರ್ಥಿಗಳು ಈಚೆಗೆ ನಡೆದ ಸಿಎ ಫೌಂಡೇಷನ್ ಹಾಗೂ ಸಿಎಸ್ ಇಇಟಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮಜೋಜ್ ಕೆ, ವಲ್ಲಿಶ.ಎಸ್, ಅನಘ.ಪಿ, ಸಂಜನಾ.ಜೆ, ಪಿ.ಸಹನಾ, ಶ್ರೀ ಭಾರ್ಗವಿ ಬಾಸ್ಕರ್ ಸಿಎ ಫೌಂಡೇಷನ್ನಲ್ಲಿ ಹಾಗೂ ವಿಷ್ಣ್.ಎಚ್.ಎ, ಗಣೇಶ್ ನಾಯಕ್ ಸಿಎಸ್ ಇಇಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಎಟಿಎನ್ಸಿ ಕಾಲೇಜು ಬಿ.ಕಾಂ ಸಂಜೆ ಕಾಲೇಜಿನಲ್ಲಿ ಬೆಳಗ್ಗಿನ ಕಾಲೇಜಿನಲ್ಲಿ ನೀಡುತ್ತಿರುವ ಎಲ್ಲ ಸೌಲಭ್ಯಗಳಿದ್ದು, ಕಡಿಮೆ ಶುಲ್ಕ ವಿಧಿಸಲಾಗುತ್ತಿದೆ. ಓದುವ ಹಾಗೂ ಉದ್ಯೋಗ ಮಾಡಿಕೊಂಡು ಕೆಲಸ ಮಾಡುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಪ್ರಸ್ತುತ 115 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ 44 ವಿದ್ಯಾರ್ಥಿನಿಯರು ಇರುವುದು ಮತ್ತೊಂದು ವಿಶೇಷ.
ಎಟಿಎನ್ಸಿ ಸಂಜೆ ಕಾಲೇಜು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಯಶಸ್ ಅಕಾಡೆಮಿ ಜತೆ ಒಪ್ಪಂದ ಮಾಡಿಕೊಂಡಿದ್ದು, ಬೆಳಗ್ಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಸಂಜೆ ಬಿ.ಕಾಂ ಶಿಕ್ಷಣ ನಡೆಯುತ್ತಿದೆ. ಜನವರಿ 2021ರಲ್ಲಿ ನಡೆದ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪ್ರಾಂಶುಪಾಲ ಬಿ.ಆರ್.ದಯಾನಂದ ತಿಳಿಸಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]