ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪ್ರಸ್ತುತ ಆವಿಷ್ಕಾರ ಕೇವಲ ಆಯ್ಕೆಯಲ್ಲ, ಅದು ಒಂದು ಅವಶ್ಯಕತೆ ಎಂದು ಎಐಸಿಟಿಇ ಇನೋವೇಶನ್ ಕೇಂದ್ರದ ಪ್ರಾದೇಶಿಕ ಸಂಯೋಜಕ ಅಶೀಷ್ ತ್ರಿಪಾಠಿ ಹೇಳಿದರು. (Boot Camp)
ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್ ಹಾಗೂ ಎಸ್‌ಬಿಐ ಫೌಂಡೇಷನ್ ಸಂಯುಕ್ತಾ ಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಐದು ದಿನಗಳ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್ ಕ್ಯಾಂಪ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ : ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ
ಆವಿಷ್ಕಾರ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದರ ಜತೆಗೆ ನೈಜ ಜಗತ್ತಿನ ಸಮಸ್ಯೆ ಗಳಿಗೆ ಪರಿಹಾರ ನೀಡುತ್ತದೆ. ಆದ್ದರಿಂದ ಯುವ ಸಮೂಹದಲ್ಲಿ ಕಾಲೇಜು ಹಂತ ಗಳಲ್ಲಿಯೆ ಉದ್ಯಮಶೀಲ ಮನೋಭಾವ ಬೆಳೆಸುವುದು ಅತ್ಯಂತ ಅಗತ್ಯವಾಗಿದೆ ಎಂದರು.

ಈ ಬೂಟ್ ಕ್ಯಾಂಪ್ ಕಾರ್ಯಕ್ರಮವು ನಾವೀನ್ಯಯುತ ಆಲೋಚನೆ ಮತ್ತು ಅದರ ಅನುಷ್ಠಾನದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿದೆ. ಉದ್ಯೋಗ ಹುಡುಕುವ ಮನಸ್ಥಿತಿಯಿಂದ ಉದ್ಯೋಗ ಸೃಷ್ಟಿಸುವ ಆತ್ಮಬಲ ನಿರ್ಮಿಸಲು ಇಂತಹ ವೇದಿಕೆಗಳು ಪ್ರೇರಣಾದಾಯಕವಾಗಿ ಕಾರ್ಯನಿರ್ವ ಹಿಸಲಿದೆ ಎಂದು ಹೇಳಿದರು. ಅರೇಕಾ ಟಿ ಕಂಪನಿಯ ಸಂಸ್ಥಾಪಕ ನಿವೇದನ್ ನೆಂಪೆ ಮಾತನಾಡಿ, ಹೊಸತನದೆಡೆಗೆ ಚಿಂತಿಸುವಾಗ ಮೂದಲಿಕೆ ಮಾತುಗಳು ಸಹಜ. ಸಮಸ್ಯೆಗಳಿದ್ದ ಕಡೆ ಅವಕಾಶಗಳು ಹೆಚ್ಚಾಗಿರುತ್ತವೆ. ಅದರ ಜತೆಯಲ್ಲಿ ಸವಾಲುಗಳು ನಮ್ಮನ್ನು ಕಾಡುತ್ತವೆ. ಅಂತಹ ಸವಾಲುಗಳನ್ನು ಸಮರ್ಪಕವಾಗಿ ನಿರ್ವಹಿಸುವ ಆತ್ಮಸ್ಥೆರ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ನಾವೀನ್ಯಯುತ ಯೋಚನೆಗಳನ್ನು ಬಲವಾಗಿ ನಂಬಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ : ಹೆದ್ದಾರಿಯಲ್ಲಿ ಗುಂಡಿ ಮುಚ್ಚಿದ ಸಂಸದ, ಗಮನ ಸೆಳೆದ JNNCE ಆವಿಷ್ಕಾರ

ಪ್ರಾಂಶುಪಾಲ ಡಾ. ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್ ಸಂಯೋಜಕ ಮೋಯಿನುದ್ದಿನ್ ಖಾನ್, ಬೂಟ್ ಕ್ಯಾಂಪ್ ಸಂಯೋಜಕ ಕೆ.ಎಲ್.ಅರುಣ್ ಕುಮಾರ್, ವಾದ್ವಾನಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಡಾ.ಸುಪ್ರಭ ಇತರರಿದ್ದರು.

LATEST NEWS
- ಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

- ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

- ಸಕೆಂಡ್ ಹ್ಯಾಂಡ್ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್? ಆಗಿದ್ದೇನು?

- ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೂಟ್ ಕ್ಯಾಂಪ್, ಏನಿದು?

- ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

About The Editor
ನಿತಿನ್ ಆರ್.ಕೈದೊಟ್ಲು










