ಶಿವಮೊಗ್ಗ ಜಿಲ್ಲೆಯ 29 ಕೇಂದ್ರಗಳಲ್ಲಿ ಸಿ.ಇ.ಟಿ ಪರೀಕ್ಷೆ ಆರಂಭ

ಶಿವಮೊಗ್ಗ: ರಾಜ್ಯದಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ 29 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಗುರುವಾರದಿಂದ ಪರೀಕ್ಷೆಗಳು ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಭವಿಷ್ಯದ ವೃತ್ತಿಪರ ಶಿಕ್ಷಣದ ಕನಸಿನೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೇಂದ್ರ

ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 9,864 ವಿದ್ಯಾರ್ಥಿಗಳು ಸಿ.ಇ.ಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ಶಿವಮೊಗ್ಗ ನಗರದ 21 ಕೇಂದ್ರಗಳಲ್ಲಿ 7,456 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಭದ್ರಾವತಿಯ 5 ಕೇಂದ್ರಗಳಲ್ಲಿ 1,120 ಹಾಗೂ ಸಾಗರ ತಾಲೂಕಿನ 3 ಕೇಂದ್ರಗಳಲ್ಲಿ 1,288 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

230426 CET Examinations Begins in Shivamogga

CET-Examinations-Begins-in-Shivamogga

ನಿಷೇಧಾಜ್ಞೆ ಜಾರಿ

ಪರೀಕ್ಷೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪ್ರತಿ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ವಿದ್ಯಾರ್ಥಿಗಳ ತಪಾಸಣೆಗೆ ವಿಶೇಷ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ ಪಾಲಿಕೆ ಕಮಿಷನರ್‌ ಹೆಸರಿನಲ್ಲಿ ನಕಲಿ ವಾಟ್ಸಪ್‌, ಅಧಿಕಾರಿಗಳಿಗೆ ಮೆಸೇಜ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment