ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ಏಪ್ರಿಲ್ 2020
ಕರೊನಾ ಹಿನ್ನೆಲೆಯಲ್ಲಿ ಹಲವಾರು ಬದಲಾವಣೆಯಾಗಿದೆ. ವರ್ಕ್ ಫ್ರಂ ಹೋಂ ಹಾಗೂ ಆನ್‌ಲೈನ್‌ನ ವ್ಯವಹಾರಗಳಿಗೆ ಇನ್ನಿಲ್ಲದ ಮಹತ್ವ ಬಂದಿರುವುದು ಕರೊನಾದಿಂದ ಎಂದರೆ ಉತ್ಪ್ರೇಕ್ಷೆಯಲ್ಲ. ಈಗ ಇದೇ ಕರೊನಾ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣಕ್ಕೂ ಕಾರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು ಆನ್‌ಲೈನ್ ಮೂಲಕವೇ ತಮ್ಮ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿದ್ದಾರೆ. ಆ ಮೂಲಕ ಸಮಯ ವ್ಯರ್ಥವಾಗುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪಾಲಕರ ಆತಂಕ ದೂರ ಮಾಡುವ ಪ್ರಯತ್ನದಲ್ಲಿದ್ದಾರೆ.
ಆ್ಯಪ್ ಮೂಲಕವೆ ಕ್ಲಾಸ್
ಆನ್‌ಲೈನ್‌ನಲ್ಲಿ ಲಭ್ಯವಿರುವ ಜೂಮ್ ಆ್ಯಪ್ ಮೂಲಕ ಎಂಬಿಎ, ಎಂಸಿಎ ಹಾಗೂ ಎಂಟೆಕ್ ಸೇರಿದಂತೆ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಪನ್ಯಾಕಸರು ತಮ್ಮ ಮನೆಗಳಿಂದಲೇ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಕಾಲೇಜಿನ ದೈನಂದಿನ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಲಾಗುತ್ತಿದೆ.
ಆನ್’ಲೈನ್’ನಲ್ಲೇ ವಿದ್ಯಾರ್ಥಿಗಳ ಹಾಜರಾತಿ
ಈ ಆ್ಯಪ್ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿಗಳನ್ನು ದಾಖಲಿಸಿಕೊಳ್ಳುವುದು, ಅಸೈನ್‌ಮೆಂಟ್‌ಗಳನ್ನು ಸ್ವೀಕರಿಸುವುದು, ಗುಂಪು ಚರ್ಚೆ, ಮುಕ್ತ ಸಂವಾದ ಮುಂತಾದ ಶಿಕ್ಷಣಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕಾಲೇಜಿನ ಅಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಗಳ ಸಭೆಯೂ ಆನ್‌ಲೈನ್ ಮೂಲಕ ನಡೆಯುತ್ತಿದೆ.
ಸುಗಮ ಶೈಕ್ಷಣಿಕ ಚಟುವಟಿಕೆ
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡೆತಡೆಯಾಗದಂತೆ ಆನ್‌ಲೈನ್ ಮೂಲಕ ಸೂಕ್ತ ಮಾಗದರ್ಶನ ನೀಡಲಾಗುತ್ತಿದೆ. ಇದರಿಂದ ಮನೆಯಲ್ಲೇ ಉಳಿದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೂ ಸಾಧ್ಯವಾಗುತ್ತಿದೆ. ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಬಹುದಾಗಿದೆ ಎಂದು ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಆರ್ ಮಹದೇವಸ್ವಾಮಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]