ಕುವೆಂಪು ವಿಶ್ವವಿದ್ಯಾಲಯ, ಪೇಮೆಂಟ್‌ ಸೀಟ್‌ಗಳಿಗೆ ಡಿಸ್ಕೌಂಟ್‌ ಘೋಷಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ

ಕುವೆಂಪು ವಿಶ್ವವಿದ್ಯಾಲಯದ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಕೆಲವು ಸ್ನಾತಕೋತ್ತರ ವಿಭಾಗಗಳಲ್ಲಿ ಉಳಿದಿರುವ ಸೀಟುಗಳಿಗೆ ವಿಶೇಷ ಸಡಿಲಿಕೆ ಮತ್ತು ಪೇಮೆಂಟ್ ಸೀಟುಗಳ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಆಗಸ್ಟ್ 14ರವರೆಗೆ ಕೌನ್ಸೆಲಿಂಗ್ ಮೂಲಕ ಮೆರಿಟ್ ಕೋಟಾದಡಿ ಭರ್ತಿಯಾಗಿ, ಖಾಲಿ ಉಳಿದಿರುವ ಸೀಟುಗಳಿಗೆ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಕೂಡ ಸಂಬಂಧಿಸಿದ ವಿಭಾಗಗಳಿಗೆ ಭೇಟಿ ನೀಡಿ ಪ್ರವೇಶಾತಿ ಪಡೆದುಕೊಳ್ಳಬಹುದು.

Kuvempu-University-File-Image

‘ಮೆರಿಟ್ ಕಮ್ ಪೇಮೆಂಟ್’ ಕೋಟಾ ಹಾಗೂ ಅನ್ಯ ವಿಶ್ವವಿದ್ಯಾಲಯದ ಸೀಟುಗಳ ಪ್ರಕಟಿತ ಶುಲ್ಕದಲ್ಲಿ ಶೇಕಡಾ 20 ರಷ್ಟು ರಿಯಾಯಿತಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರವರೆಗೆ ರಿಯಾಯಿತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದಾಗಿದೆ. ಕುವೆಂಪು ವಿಶ್ವವಿದ್ಯಾಲಯದ ಯಾವುದೇ ಮೆರಿಟ್ ಕೋಟಾದಡಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಅನ್ಯ ವಿಶ್ವವಿದ್ಯಾಲಯಗಳ ಅರ್ಹ ಅಭ್ಯರ್ಥಿಗಳನ್ನು ಕುವೆಂಪು ವಿಶ್ವವಿದ್ಯಾಲಯದ ಅಭ್ಯರ್ಥಿಗಳೆಂದೇ ಪರಿಗಣಿಸಿ ಪ್ರವೇಶಾತಿ ನೀಡಲಾಗುವುದು.

ಜಿಯೋಲಜಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್, ಪರಿಸರ ವಿಜ್ಞಾನ, ಫಾರ್ಮಾಸಿಟಿಕಲ್ ಕೆಮಿಸ್ಟ್ರಿ, ವನ್ಯಜೀವಿ ನಿರ್ವಹಣಾ ವಿಭಾಗ, ಎಂಎಡ್, ಕಲಾ ನಿಕಾಯದಲ್ಲಿ ಕನ್ನಡ, ಹಿಂದಿ, ಉರ್ದು, ಸಂಸ್ಕೃತ, ಪತ್ರಿಕೋದ್ಯಮ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಹಾಗೂ ಮುಂತಾದ ಸ್ನಾತಕೋತ್ತರ ವಿಭಾಗಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.