ಫೆ.10ರೊಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ತರಗತಿ ಬಹಿಷ್ಕಾರ
EDUCATION NEWS : ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗುಡೇಕೇರಿ ಸರ್ಕಾರಿ ಪ್ರೌಢಶಾಲೆಯ ನಿವೇಶನ ಒತ್ತುವರಿಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಫೆ.12ರಂದು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸುವುದಾಗಿ ಶಾಲಾಭಿವೃದ್ಧಿ ಸಮಿತಿ ಎಚ್ಚರಿಸಿದೆ. ಫೆ.10ರೊಳಗೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ವಿದ್ಯಾರ್ಥಿಗಳು, ಪಾಲಕರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರ ನೆರವಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದಾಗಿ ಸಮಿತಿ ಅಧ್ಯಕ್ಷ ಎಂ.ಜಿ. ಸುರೇಶ್ ತಿಳಿಸಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ