ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಎಟಿಎನ್‍ಸಿ ಕಾಲೇಜು ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅನ್ನಪೂರ್ಣ ಕಾಮತ್ ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವತಿಯಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದರು. ಪ್ರತಿ ಭಾರಿ 160 ವಿದ್ಯಾರ್ಥಿಗಳು ಪರೇಡ್‍ನಲ್ಲಿ ಭಾಗವಹಿಸುತ್ತಿದ್ದರು. ಕೋವಿಡ್ ಕಾರಣದಿಂದಾಗಿ ಈ ಭಾರಿ 80 ವಿದ್ಯಾರ್ಥಿಗಳು ಮಾತ್ರ ಪಾಲ್ಗೊಂಡಿದ್ದರು.
30 ವರ್ಷದ ಬಳಿಕ
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಎಟಿಎನ್‍ಸಿ ಕಾಲೇಜು ಪ್ರಾಂಶುಪಾಲ ಹೆಚ್.ಎಂ.ಸುರೇಶ್, 30 ವರ್ಷದ ಬಳಿಕ ಎಟಿಎನ್‍ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಂಡಿದ್ದಾರೆ. ಈ ಅವಕಾಶ ಲಭಿಸಿರುವುದು ನಮಗೆ ಹೆಮ್ಮೆ ಅನಿಸಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಅವರು ಭಾಗಹಿಸಿದ್ದಾರೆ ಎಂದರು.
ಇದನ್ನೂ ಓದಿ | ರಾಜಪಥದಲ್ಲಿ ಕರ್ನಾಟಕದ ಸ್ಥಬ್ಧಚಿತ್ರಕ್ಕೆ ಜೀವ ತುಂಬಿದ ಶಿವಮೊಗ್ಗ ರಂಗಾಯಣದ ಕಲಾವಿದರು
ಪ್ರೊ. ಜಗದೀಶ್, ಪ್ರೊ. ಕೆ.ಎಂ.ನಾಗರಾಜ್, ಕನ್ನಡ ವಿಭಾಗದ ಉಪನ್ಯಾಶಕ ಪ್ರವೀಣ್ ಬಿ.ಎನ್. ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]