ಶಿವಮೊಗ್ಗದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಪದವಿ ಪ್ರದಾನ, ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ: ಮನುಷ್ಯ ತನ್ನ ಮನಸ್ಸಿನಲ್ಲಿ ಯಾವ ವಿಚಾರಗಳನ್ನು ತುಂಬಿಕೊಳ್ಳುತ್ತಾನೆ ಎನ್ನುವುದರ ಮೇಲೆ ಆತನ ಜೀವನದ ಮೌಲ್ಯ ನಿರ್ಧಾರವಾಗುತ್ತದೆ. ಕಲಿತ ವಿದ್ಯೆಯನ್ನು ಸನ್ಮಾರ್ಗ ಹಾಗೂ ಸತ್ಕರ್ಮಕ್ಕೆ ಬಳಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಹೇಳಿದರು. (ಈ ಸುದ್ದಿಯನ್ನು ಇನ್ನು 64 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಗರದ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಬಾಪೂಜಿ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಕಾಲೇಜುಗಳ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Bapuji-Vidhya-Samsthe-Graduation-Day-at-Sarji-Convention-hall

ದೇಶದಲ್ಲಿ ಆಯುರ್ವೇದ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಬೇಡಿಕೆಯಿದೆ. ಭಾರತದ ಆಯುರ್ವೇದ ಔಷಧಗಳ ವಿದೇಶಿ ರಫ್ತು ₹20 ಸಾವಿರ ಕೋಟಿ ದಾಟಿದೆ. ಪ್ರಸ್ತುತ ಆರೋಗ್ಯ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶಗಳಿವೆ. ವಿದ್ಯಾರ್ಥಿಗಳು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಎಸ್.ಎನ್. ಚನ್ನಬಸಪ್ಪ, ಶಾಸಕ: ಇಡೀ ವಿಶ್ವಕ್ಕೆ ಭಾರತ ನೀಡಿದ ದೊಡ್ಡ ಕೊಡುಗೆ ಆಯುರ್ವೇದ. ಬಾಪೂಜಿ ಸಂಸ್ಥೆಯು 20 ಬ್ಯಾಚ್‌ಗಳಲ್ಲಿ ಸಾವಿರಕ್ಕೂ ಹೆಚ್ಚು ಆಯುರ್ವೇದ ವೈದ್ಯರನ್ನು ತಯಾರಿಸಿ ದೇಶ ಹಾಗೂ ವಿದೇಶಗಳಿಗೆ ನೀಡಿದೆ ಎಂದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಡಿ.ಎಸ್. ಅರುಣ್, ಎಂಎಲ್‌ಸಿ: ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು.

ಇದೇ ವೇಳೆ ಮಾಜಿ ಶಾಸಕ ಮಹಿಮಾ ಪಟೇಲ್ ಅವರು ಜೆ.ಎಚ್. ಪಟೇಲ್ ಅವರ ಭಾವಚಿತ್ರ ಅನಾವರಣಗೊಳಿಸಿ, ಹಿರಿಯರ ಆರೈಕೆ ಕೇಂದ್ರ ಉದ್ಘಾಟಿಸಿದರು. ಪ್ರಾಂಶುಪಾಲರಾದ ಡಾ. ಶೀಲಾ ಎನ್.ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ಎಂ.ವಿ.ಪಿ. ಆರಾಧ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕೋಶಾಧಿಕಾರಿ ಎಂ.ಪಿ. ರಮೇಶ್, ಎ.ಎನ್. ವಿಜಯೇಂದ್ರ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಧಕರನ್ನು ಗೌರವಿಸಲಾಯಿತು. ಗಾಯಕಿ ಬಿ.ಆರ್. ಛಾಯಾ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.