ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಶಿವಮೊಗ್ಗ: ಜಿಲ್ಲೆಯಾದ್ಯಂತ ಬುಧವಾರದಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ (SSLC exams) ಆರಂಭವಾಗದೆ. ಮೊದಲ ದಿನದ ಪ್ರಥಮ ಭಾಷೆ ಪರೀಕ್ಷೆಗೆ ಒಟ್ಟು 192 ವಿದ್ಯಾರ್ಥಿಗಳು ಗೈರಾಗಿದ್ದಾರೆ. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 22,621 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22,429 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ. 99 ರಷ್ಟು ಹಾಜರಾತಿ ದಾಖಲಾಗಿದೆ. ಮೊದಲ ದಿನದಂದು ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್, ಉರ್ದು ಮತ್ತು ಸಂಸ್ಕೃತ ಸೇರಿದಂತೆ ಪ್ರಥಮ ಭಾಷೆಯ ಪರೀಕ್ಷೆಯನ್ನು ಎದುರಿಸಿದರು.

SSLC-Exam-in-Shimoga-School

SSLC-Exam-in-Shimoga-School

ಜಿಲ್ಲೆಯ ಒಟ್ಟು 79 ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ಜರುಗಿತು. ಬೆಳಿಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿ, 9:30 ರ ನಂತರ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಬಿಇಒ ರಮೇಶ್ ನಾಯಕ್ ಸೇರಿದಂತೆ ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Sunrise Facility Services, Sri sai Trust Shimoga

 

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment