KSRTC ಬಸ್‌: ವಿದ್ಯಾರ್ಥಿಗಳ ಬಸ್‌ ಪಾಸ್‌ ಕುರಿತು ಮಹತ್ವದ ಅಪ್‌ಡೇಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್‌ ವಿತರಣೆಯನ್ನು ಆರಂಭಿಸಿದೆ. ಸರ್ಕಾರದ ಆದೇಶದನ್ವಯ ಜೂನ್‌ 12ರಿಂದಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ನೀಡಲಾಗುತ್ತಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಉಚಿತ ಬಸ್‌ ಪಾಸ್‌ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in/buspassservices) ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಬಸ್‌ ಪಾಸ್‌ ವಿತರಣೆಯ ಹಳೆಯ ನಿಯಮಾವಳಿಗಳೇ ಮುಂದುವರಿಯಲಿವೆ.

ksrtc-news-update-thumbnail.webp

ಶುಲ್ಕ ಮರುಪಾವತಿ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಪಾಸ್‌ ಪಡೆದಿರುವ ವಿದ್ಯಾರ್ಥಿಗಳಿಗೆ ಅವರು ಪಾವತಿಸಿರುವ ಸಂಪೂರ್ಣ ಮೊತ್ತವನ್ನು 15 ದಿನಗಳ ಒಳಗಾಗಿ ಮರುಪಾವತಿ ಮಾಡಲಾಗುವುದು ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಗಡಿಭಾಗದ ವಿದ್ಯಾರ್ಥಿಗಳಿಗೂ ಅನ್ವಯ

ಕರ್ನಾಟಕದಲ್ಲಿ ವಾಸವಿದ್ದು ನೆರೆ ರಾಜ್ಯಗಳ ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ಹಾಗೂ ನೆರೆ ರಾಜ್ಯಗಳ ಗಡಿಭಾಗದಲ್ಲಿ ವಾಸವಿದ್ದು ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳೂ ಈ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಪಡೆಯಬಹುದಾಗಿದೆ. ಪಾಸ್‌ ವಿತರಣಾ ಕೌಂಟರ್‌ಗಳ ವಿವರಗಳನ್ನು ನಿಗಮದ ಅಧಿಕೃತ ವೆಬ್‌ಸೈಟ್‌ (https://ksrtc.karnataka.gov.in) ನಲ್ಲಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!