ಸ್ಪರ್ಧಾತ್ಮಕ ಪರೀಕ್ಷೆಗಳು, 45 ದಿನಗಳ ಉಚಿತ ತರಬೇತಿ, ಯಾರೆಲ್ಲ ನೋಂದಣಿ ಮಾಡಿಕೊಳ್ಳಬಹುದು?

ಶಿವಮೊಗ್ಗ: ದೇಶದ ವಿವಿಧ ಬ್ಯಾಂಕಿಂಗ್, ಎಸ್‌ಎಸ್‌ಸಿ ಹಾಗೂ ಆರ್‌ಆರ್‌ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಅರ್ಹ ಆಕಾಂಕ್ಷಿಗಳು ತರಬೇತಿಗೆ ನೋಂದಾಯಿಸಿಕೊಳ್ಳಲು ಅಕ್ಟೋಬರ್ 17 ಕೊನೆಯ ದಿನ. ಆಸಕ್ತರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಣಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

EDUCATION-NEWS-GRAPHICS-BY-SHIVAMOGGA-LIVE