ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020
ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೂ ಕರೋನ ಬಿಸಿ ತಟ್ಟಿದೆ. ಈ ಬಾರಿ ಆನ್ಲೈನ್ ಮತ್ತು ವೆಬಿನೇರ್ ಘಟಿಕೋತ್ಸವ ನಡೆಯಲಿದೆ.
ಜುಲೈ 29ರಂದು 30ನೇ ಘಟಿಕೋತ್ಸವಕ್ಕೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಘಟಿಕೋತ್ಸವ ಆರಂಭವಾಗಲಿದೆ. ರಾಜ್ಯಪಾಲ ವಜುಭಾಯಿ ರೂಡಭಾಯಿ ವಾಲಾ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಉಪಸ್ಥಿತರಿರಲಿದ್ದಾರೆ. ಒಡಿಶಾದ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಪಿ.ವಿ.ಕೃಷ್ಣಭಟ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

ಆನ್ಲೈನ್ ಮೂಲಕ ಘಟಿಕೋತ್ಸವ
ಕೋವಿಡ್ 19 ಹಿನ್ನೆಲೆ ಈ ಬಾರಿ ಘಟಿಕೋತ್ಸವದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕುವೆಂಪು ವಿವಿಯ ವೆಬ್ಸೈಟ್ನಲ್ಲಿ ಲೈವ್ ಪ್ರಸಾರ ಆಗಲಿದೆ. ಇನ್ನು ಯು ಟ್ಯೂಬ್ ಮತ್ತು ವೆಬಿನೇರ್ ಮೂಲಕವು ಘಟಿಕೋತ್ಸವವನ್ನು ನೇರ ಪ್ರಸಾರದಲ್ಲಿ ವೀಕ್ಷಿಸಬಹುದು. ಈಗಾಗಲೇ ವಿದ್ಯಾರ್ಥಿಗಳಿಗೆ ಲಿಂಕ್ಗಳನ್ನು ಮೆಸೇಜ್ ಮಾಡಲಾಗಿದೆ. ಕೆಲವೆ ಕೆಲವು ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮತ್ತು ಪಿಹೆಚ್ಡಿ ಪದವಿ ನೀಡಲಾಗುತ್ತದೆ. ಉಳಿದವರಿಗೆ ಪೋಸ್ಟ್ ಮೂಲಕ ಪದಕ ಕಳುಹಿಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.
ಖಾದಿ ಗೌನು, ಶಿವಪ್ಪನಾಯಕನ ಧಿರಿಸು, ಮೈಸೂರು ಪೇಟಾ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆ ಈ ಬಾರಿ ಘಟಿಕೋತ್ಸವದಲ್ಲಿ ಖಾದಿ ರಾರಾಜಿಸಲಿದೆ. ಕುಲಪತಿ, ಕುಲಸಚಿವ ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸುವವರೆಲ್ಲ ಖಾದಿ ಬಟ್ಟೆ ಧರಿಸಲಿದ್ದಾರೆ. ಖಾದಿ ಗೌನ್ ಧರಿಸಿ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಶಿವಪ್ಪನಾಯಕ ತೊಡುತ್ತಿದ್ದ ಮಾದರಿಯ ಧಿರಿಸು ತೊಡಲಿದ್ದೇವೆ. ಮೈಸೂರು ಪೇಟಾ ಹಾಕಲಿದ್ದೇವೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು.
ಗೌರವ ಡಾಕ್ಟರೇಟ್ ಇಲ್ಲ
ಈ ಬಾರಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರ್ ಪದವಿ ನೀಡಲಾಗುತ್ತಿಲ್ಲ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗೌರವ ಡಾಕ್ಟರೇಟರ್ ಸಂಬಂಧ ಪಟ್ಟಿಯೊಂದನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಆದರೆ ಈ ಕುರಿತು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.
ಕುಲಸಚಿವ ಪ್ರೊ. ಎಸ್.ಎಸ್.ಪಾಟೀಲ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಸತ್ಯಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200