ಕುವೆಂಪು ವಿಶ್ವವಿದ್ಯಾಲಯ: ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಯಾವಾಗ ಕೊನೆಯ ದಿನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿದೆ.

ಸ್ನಾತಕ ಪದವಿ ರಿಪೀಟರ್ಸ್ ಪರೀಕ್ಷಾ ಫಲಿತಾಂಶ ಹಾಗೂ ರಾಜ್ಯದ ಇತರ ವಿಶ್ವವಿದ್ಯಾಲಯಗಳ ಫಲಿತಾಂಶ ಪ್ರಕಟಣೆ ವಿಳಂಬವಾಗಿರುವ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಜುಲೈ 31 ಕೊನೆಯ ದಿನ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಮೆರಿಟ್ ಪಟ್ಟಿ ಆಗಸ್ಟ್ 10ರಂದು ಪ್ರಕಟವಾಗಲಿದ್ದು, ಮೆರಿಟ್ ಮತ್ತು ವಿಶೇಷ ವರ್ಗದ ಪ್ರವೇಶಾತಿ ಕೌನ್ಸಿಲಿಂಗ್‌ ಆಗಸ್ಟ್ 13ರಂದು ಹಾಗೂ ಮೆರಿಟ್ ಕಮ್ ಪೇಮೆಂಟ್ ಕೌನ್ಸಿಲಿಂಗ್ ಆಗಸ್ಟ್ 14ರಂದು ನಡೆಯಲಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಕುಲಸಚಿವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Kuvempu-University-File-Image