ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHANKARAGHATTA | 18 ಡಿಸೆಂಬರ್ 2019
ಕುವೆಂಪು ವಿಶ್ವವಿದ್ಯಾಲಯ ನಡೆಸುತ್ತಿರುವ ದೂರಶಿಕ್ಷಣ ಕೋರ್ಸ್’ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿವಿಗೆ ವರ್ಗಾಯಿಸುವ ಕುರಿತು, ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಆತಂಕಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭೆಯಲ್ಲಿ ರಾಜ್ಯದ ವಿವಿಧ ವಿವಿಗಳಲ್ಲಿ ನಡೆಯುತ್ತಿರುವ ದೂರಶಿಕ್ಷಣ ಕೋರ್ಸ್’ಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಹಾಗೂ ತಾನು ಮಾತ್ರ ದೂರಶಿಕ್ಷಣ ನೀಡಲು ಅನುಮತಿ ನೀಡಬೇಕೆಂದು ಕರ್ನಾಟಕ ರಾಜ್ಯ ಮುಕ್ತ ವಿವಿಯು ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿ ಶಿಕ್ಷಣ ಇಲಾಖೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ವರದಿಗಳು ಪ್ರಕಟವಾಗಿದೆ. ಈ ಸಭೆಯಲ್ಲಿ ಕುವೆಂಪು ವಿವಿಯ ಕುಲಪತಿ ಮತ್ತು ಕುಲಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲ ವಿವಿಯ ದೂರಶಿಕ್ಷಣ ಕೋರ್ಸ್’ಗಳ ರದ್ಧತಿ ಬಗ್ಗೆ ಕೇವಲ ಚರ್ಚೆ ನಡೆದಿದೆ. ಆದರೆ ಯಾವುದೇ ನಿರ್ಣಯಕ್ಕೆ ಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುವೆಂಪು ವಿವಿಯ ಎಲ್ಲ ದೂರಶಿಕ್ಷಣ ಕೋರ್ಸ್’ಗಳು ಮೊದಲಿನಂತೆಯೇ ಮುಂದುವರಿಸಲಾಗುತ್ತದೆ. ಮುಂದಿನ ಐದು ವರ್ಷಗಳಿಗೆ ವಿವಿಯ ಎಲ್ಲ ದೂರಶಿಕ್ಷಣ ಕೋರ್ಸ್’ಗಳಿಗೆ ಯುಜಿಸಿ ಮತ್ತು ಕರ್ನಾಟಕ ಸರ್ಕಾರದ ಅನುಮತಿಯಿದೆ. ವಿದ್ಯಾರ್ಥಿಗಳು ಈ ಸಂಬಂಧ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Kuvempu University Distance Education Courses
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422