ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವಿದ್ದರೂ ನಿಗದಿಯಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ವೇಳಾಪಟ್ಟಿ ಪ್ರಕಾರವೇ ನಡೆಯಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ.
ಏಪ್ರಿಲ್ 7ರಂದು ನಿಗದಿಯಾಗಿರುವ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಅನಿರ್ದಿಷ್ಟಾವಧಿಯದಾಗಿದ್ದು, ಮುಷ್ಕರ ಮುಂದುವರೆಯುವವರೆಗೆ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಾಗುವುದಿಲ್ಲ. ಇನ್ನು ಪರೀಕ್ಷೆಗಳನ್ನು ಮುಂದೂಡಬೇಕೆಂದು ಪದವಿ ಕಾಲೇಜುಗಳ ಯಾವುದೇ ಪ್ರಾಂಶುಪಾಲರಿಂದ ಮನವಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾಳಿನ ಪರಿಸ್ಥಿತಿಯ ಬಗ್ಗೆ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ಪರೀಕ್ಷೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






