ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 NOVEMBER 2023
SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಮೆರಿಟ್ ಸೀಟ್ಗಳನ್ನು ಭರ್ತಿ ಮಾಡಿಕೊಳ್ಳಲಾಯಿತು. 33 ಸ್ನಾತಕೋತ್ತರ ವಿಭಾಗಗಳಲ್ಲಿ ಶೇ.85ರಷ್ಟು ಮೆರಿಟ್ ಸೀಟುಗಳು ಭರ್ತಿಯಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೂರು ದಿನದ ಕೌನ್ಸೆಲಿಂಗ್
ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ನವೆಂಬರ್ 27, 28 ಮತ್ತು 29ರಂದು ಪ್ರವೇಶಾತಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಮೆರಿಟ್ ಸೀಟ್ಗಳ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ನ.28 ಹಾಗೂ 29ರಂದು ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ.
ಇದನ್ನೂ ಓದಿ – 2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?
ಇವತ್ತು ಆಫ್ಲೈನ್ನಲ್ಲಿ ಶುಲ್ಕ ಭರಿಸುವವರ ಸಂಖ್ಯೆ ಹೆಚ್ಚಾಗಿತ್ತು. ಹಾಗಾಗಿ ಬ್ಯಾಂಕ್ನಲ್ಲಿ ಹೆಚ್ಚುವರಿ ಮೂರು ಕೌಂಟರ್ ತೆರೆಯಲಾಗಿತ್ತು. ಬಸವ ಸಭಾ ಭವನ ಹಾಗೂ ಜೀವ ವಿಜ್ಞಾನ ಸಮುಚ್ಛಯದಲ್ಲಿಯು ಶುಲ್ಕ ಭರಿಸುವ ಕೌಂಟರ್ಗಳನ್ನು ತೆರೆಯಲಾಗಿತ್ತು.



LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






