ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ 33 ವಿಭಾಗಗಳ 45 ಕೋರ್ಸ್‍ಗಳಿಗೆ ಡಿಸೆಂಬರ್ 18-19 ರಂದು ಹಾಗೂ 21ರಂದು ಪ್ರವೇಶಾತಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣ ಪ್ರವೇಶಾತಿಯನ್ನು ಈ ಮೂರು ದಿನಗಳಲ್ಲಿಯೇ ಮಾಡಿ ಮುಗಿಸಲು ವಿವಿ ಯೋಜಿಸಿದೆ.
18 ಮತ್ತು 19ರಂದು ಮೆರಿಟ್ ಸೀಟುಗಳು ಮತ್ತು ವೆಯ್ಟಿಂಗ್ ಪಟ್ಟಿಯ ಅಭ್ಯರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಸೋಮವಾರ 21 ರಂದು ಉಳಿಕೆ ಸೀಟುಗಳು, ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ.
ವಿವಿಧ ವಿಭಾಗಗಳಿಗೆ ಅರ್ಜಿ ಹಾಕಿರುವ ವಿದ್ಯಾರ್ಥಿಗಳು 18ರಂದು ಬೆಳಿಗ್ಗೆ 9.30ಕ್ಕೆ ಅಗತ್ಯ ದಾಖಲೆಗಳೊಂದಿಗೆ ವಿವಿಯ ಜ್ಞಾನಸಹ್ಯಾದ್ರಿ ಆವರಣಕ್ಕೆ ಆಗಮಿಸಬೇಕು ಎಂದು ಶೈಕ್ಷಣಿಕ ವಿಭಾಗದ ಕುಲಸಚಿವ ಡಾ. ಗೋವಿಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]