SHIVAMOGGA LIVE | 20 JULY 2023
SHIMOGA : ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ ಬಾರಿಯು ವಿದ್ಯಾರ್ಥಿನಿಯರು ಚಿನ್ನದ ಬೇಟೆ ಮುಂದುವರೆಸಿದ್ದಾರೆ. 33ನೇ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳು ಮತ್ತು ನಗದು ಪುರಸ್ಕಾರಗಳನ್ನು (Rank Holders) ವಿದ್ಯಾರ್ಥಿನಿಯರೆ ಬಾಚಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಜು.22ರಂದು ಶಂಕರಘಟ್ಟದ ಕುವೆಂಪು ವಿವಿ ಆವರಣದ ಬಸವ ಸಭಾ ಭವನದಲ್ಲಿ ಘಟಿಕೋತ್ಸವ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಭಾಗವಹಿಸಲಿದ್ದಾರೆ. ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಕುಲಾಧಿಪತಿ ಡಾ. ಸುರೇಶ್. ಬಿ.ಎನ್ ಅವರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮೂವರಿಗೆ ಗೌರವ ಡಾಕ್ಟರೇಟ್
ಈ ಬಾರಿ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತಿದೆ. ಉಡುಪಿ ಮೂಲದ ಶಿಕ್ಷಣ ತಜ್ಞ ಮತ್ತು ಉದ್ಯಮಿ ಸದಾನಂದ ಶೆಟ್ಟಿ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಸಾಧನೆಗಾಗಿ ವಿಜಯಪುರದ ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದ ಸೇವೆಗಾಗಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು.
ರ‍್ಯಾಂಕ್ ವಿಜೇತರ ಪಟ್ಟಿ ಪ್ರಕಟ
ಪ್ರಸಕ್ತ ಶೈಕ್ಷಣಿಕ ವರ್ಷದ ರ‍್ಯಾಂಕ್ ವಿಜೇತರ (Rank Holders) ಪಟ್ಟಿಯನ್ನು ಪ್ರೊ. ಬಿ.ಪಿ.ವೀರಭದ್ರಪ್ಪ ಪ್ರಕಟಿಸಿದರು. ಈ ಬಾರಿ 74 ಮಂದಿ 141 ಚಿನ್ನದ ಪದಕ ಪಡೆದಿದ್ದಾರೆ. ಈ ಪೈಕಿ 58 ವಿದ್ಯಾರ್ಥಿನಿಯರು, 16 ವಿದ್ಯಾರ್ಥಿಗಳಿದ್ದಾರೆ. 18 ನಗದು ಬಹುಮಾನಗಳನ್ನು 3 ವಿದ್ಯಾರ್ಥಿಗಳು, 13 ವಿದ್ಯಾರ್ಥಿನಿಯರು ಪಡೆದಿದ್ದಾರೆ ಎಂದು ತಿಳಿಸಿದರು.
ಜ್ಞಾನ ಸಹ್ಯಾದ್ರಿಯ ಕನ್ನಡ ಎಂ.ಎ ವಿಭಾಗದ ವಿಸ್ಮಿತಾ.ವಿ 12 ಚಿನ್ನದ ಪದಕ ಮತ್ತು 2 ನಗದು ಬಹುಮಾನ ಪಡೆದಿದ್ದಾರೆ. ಜ್ಞಾನ ಸಹ್ಯಾದ್ರಿಯ ಎಂ.ಎ ಸಮಾಜಶಾಸ್ತ್ರ ವಿಭಾಗದ ಆಶಾ.ಆರ್, ವ್ಯವಹಾರ ನಿರ್ವಹಣಾ ಅಧ್ಯಯನ ವಿಭಾಗದ ನೇಹಾ.ಆರ್, ಎಂ.ಎಸ್ಸಿ ಪರಿಸರ ವಿಜ್ಞಾನ ವಿಭಾಗದ ರೋಹಿಣಿ.ಯು, ಸಹ್ಯಾದ್ರಿ ವಿಜ್ಞಾನ ಕಾಲೇಜು ಎಂ.ಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ತೃಪ್ತಿ.ಎ, ಎಟಿಎನ್‌ಸಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ರಮ್ಯಾ.ಎಸ್ ತಲಾ 5 ಚಿನ್ನದ ಪದಕ ಪಡೆದಿದ್ದಾರೆ.
ಜ್ಞಾನಸಹ್ಯಾದ್ರಿಯ ಎಂ.ಎಸ್ಸಿ ಗಣಿತಶಾಸ್ತ್ರ ವಿಭಾಗದ ಧನುಷ್ ಚೌಹಾಣ್.ಎಂ 4 ಚಿನ್ನದ ಪದಕ ಮತ್ತು 2 ನಗದು ಬಹುಮಾನ ಗಳಿಸಿದ್ದಾರೆ. ಎಂ.ಎ ಉರ್ದು ವಿಭಾಗದ ತರನುಮ್ ಬಾನು, ಎಂ.ಎ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಶ್ರೀನಿವಾಸ ವಿ.ಎನ್, ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದ ಪ್ರಿಯಾಂಕಾ.ಪಿ.ಎಂ, ಸಸ್ಯಶಾಸ್ತ್ರ ವಿಭಾಗದ ಬಿಂದು ದಿನೇಶ್ ನಾಯಕ್ ಅವರು ತಲಾ 4 ಚಿನ್ನದ ಪದಕ ಪಡೆದಿದ್ದಾರೆ.
ಬಿ.ಇಡ್‌ನಲ್ಲಿ ಗಜಲಾ ಹಫೀಜ್.ಎ 3 ಚಿನ್ನದ ಪದಕ ಮತ್ತು 1 ನಗದು ಬಹುಮಾನ ಪಡೆದಿದ್ದಾರೆ. ಎಂ.ಎ ಇಂಗ್ಲೀಷ್‌ನ ಸೌಮ್ಯಾ ಎಂ.ಪಿ, ಎಂ.ಎ.ರಾಜ್ಯಶಾಸ್ತ್ರ ವಿಭಾಗದ ರಾಕೇಶ್ ಆರ್.ಸುಣಗಾರ್, ಎಂ.ಕಾಂನ ರಮೇಶ್ ರಾಜಪ್ಪ ಗುಡ್ಡದಮತಿಹಳ್ಳಿ, ಎಂ.ಎಸ್ಸಿ ಔದ್ಯೋಗಿಕ ರಸಾಯನಶಾಸ್ತ್ರ ಅಂಕಿತಾ ಹೆಚ್.ಸಿ, ಎಂ.ಎಸ್ಸಿ ಪ್ರಾಣಿಶಾಸ್ತ್ರ ಸಿಂಚನಾ ಕೆ.ವಿ ಅವರು ತಲಾ 3 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ – ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್, ಜು.21ರಂದು ಪ್ರದಾನ
ಪ್ರಸಕ್ತ ಶೈಕ್ಷಣಿಕ ವರ್ಷ 5499 ವಿದ್ಯಾರ್ಥಿಗಳು, 9251 ವಿದ್ಯಾರ್ಥಿನಿಯರು ಸೇರಿ ಒಟ್ಟು 14750 ವಿದ್ಯಾರ್ಥಿಗಳು ಪದವಿ ಪಡೆದ್ದಾರೆ. 159 ಅಭ್ಯರ್ಥಿಗಳು ಪಿಹೆಚ್‌ಡಿ ಪದವಿ ಪಡೆದಿದಾರೆ ಎಂದು ಕುಲಪತಿ ತಿಳಿಸಿದರು.
ಕುಲಸಚಿವೆ ಪ್ರೊ. ಸಿ.ಗೀತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಹಣಕಾಸು ವಿಭಾಗದ ಮುಖ್ಯಸ್ಥ ನರಸಿಂಹಮೂರ್ತಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಂ.ಆರ್.ಸತ್ಯಪ್ರಕಾಶ್, ಉಪ ಕುಲಸಚಿವ ಮಂಜುನಾಥ್ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200