ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ ಸ್ಥಾನ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ 37ನೇ ಸ್ಥಾನ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 50ನೇ ಸ್ಥಾನ ಪಡೆದಿದೆ.
ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ.

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದೆ.

ಇದನ್ನೂ ಓದಿ » ಬಿಪಿಎಲ್ ಕುಟುಂಬಗಳಿಗೆ ಅನ್ಯಾಯ, ಕೂಡಲೆ ಕಾರ್ಡ್ ವಿತರಣೆಗೆ ಆಗ್ರಹ
University ranking list
LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು
















