ಭಾರತದ ಟಾಪ್‌ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ ಸ್ಥಾನ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ 37ನೇ ಸ್ಥಾನ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 50ನೇ ಸ್ಥಾನ ಪಡೆದಿದೆ. 

ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. 

Kuvempu University General Image 1

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದೆ.

Prashanth-Loan-Advertisement.

ಇದನ್ನೂ ಓದಿ » ಬಿಪಿಎಲ್‌ ಕುಟುಂಬಗಳಿಗೆ ಅನ್ಯಾಯ, ಕೂಡಲೆ ಕಾರ್ಡ್‌ ವಿತರಣೆಗೆ ಆಗ್ರಹ

University ranking list

kuvempu-University-

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment