ಕುವೆಂಪು ವಿವಿ ಸ್ನಾತಕ ಪದವಿ ಪ್ರವೇಶಕ್ಕೆ ಕೊನೆ ದಿನಾಂಕ ನಿಗದಿ, ಸಮಾನರೂಪ ವೇಳಾಪಟ್ಟಿ ಬಿಡುಗಡೆ

NEWS HIGHLIGHTS

⇒ ಸಮಾನರೂಪ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಇಲಾಖೆ

⇒ ಜುಲೈ 01ರಿಂದಲೇ ಪ್ರಾರಂಭವಾಗಿರುವ ಯುಜಿ ಪ್ರವೇಶ ಪ್ರಕ್ರಿಯೆ

⇒ ಕುವೆಂಪು ವಿವಿ: 2022-23ನೇ ಸಾಲಿನ ಸ್ನಾತಕ ಪದವಿ ಪ್ರವೇಶಕ್ಕೆ ಜು. 30ರವರೆಗೆ ಅವಕಾಶ

SHIVAMOGGA LIVE | KUVEMPU UNIVERSITY | 10 JULY 2022

ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಜುಲೈ 01ರಿಂದಲೇ ಪ್ರಾರಂಭವಾಗಿದ್ದು, ಜು. 30ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

Shimoga Nanjappa Hospital Health Checkup

ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇಲಾಖೆಯಡಿ ಬರುವ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ ಮತ್ತು ಅನುದಾನರಹಿತ ಕಾಲೇಜುಗಳಿಗೆ ಈ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕುವೆಂಪು ವಿಶ್ವವಿದ್ಯಾಲಯವು ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಳವಡಿಸಿಕೊಂಡಿದೆ. ವಿವಿ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪದವಿ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಜುಲೈ 01ರಿಂದಲೇ ಪ್ರಾರಂಭಿಸಲು ಈಗಾಗಲೇ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದ್ದಾರೆ.

ಎಲ್ಲ ಪ್ರವೇಶ ಪ್ರಕ್ರಿಯೆಗಳು ಕರ್ನಾಟಕ ಸರ್ಕಾರದ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಪೋರ್ಟಲ್ ಮೂಲಕ ನಡೆಯಲಿದೆ. ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚಿನ ಶೈಕ್ಷಣಕ ಸಂಸ್ಥೆಗಳಲ್ಲಿ ಪ್ರವೇಶ ಕೋರಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪ್ರತಿ ಕಾಲೇಜುಗಳ ಹಂತದಲ್ಲಿ UUCMS ಹೆಲ್ಪ್ ಡೆಸ್ಕ್ ಗಳನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಸಂಬಂಧ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಿಕೊಳ್ಳಬಹುದಾಗಿದೆ.

ಇನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ-ಗವರ‍್ನೆನ್ಸ್ ಘಟಕ ಸ್ಥಾಪಿಸಲಾಗಿದೆ. ಎನ್‌ಇಪಿ ಪ್ರವೇಶ ಪ್ರಕ್ರಿಯೆಯ ಯಾವುದೇ ಗೊಂದಲಗಳಿದ್ದರೂ ನಿಭಾಯಿಸಲು ಸನ್ನದ್ಧವಾಗಿದೆ. ಹೆಚ್ಚಿನ ಮಾಹಿತಿಗೆ ಘಟಕದ ಮುಖ್ಯಸ್ಥ ಪ್ರೊ. ಅಶ್ವಕ್ ಅಹಮದ್ ಅವರನ್ನು (98451-42267) ಸಂಪರ್ಕಿಸಬಹುದು ಎಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದ್ದಾರೆ.

ಇದನ್ನೂ ಓದಿ – ಸುರಿಯುವ ಮಳೆಯಲ್ಲೆ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

ADVERTISEMENT

Kuvempu-University-File-Image

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 10, 2022 at 2:51 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 10, 2022

Leave a Comment