ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಮತ್ತು ಸಿಂಡಿಕೇಟ್ ಸದಸ್ಯರನ್ನು ಒಳಗೊಂಡ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಸಿಎಂ ಭೇಟಿಯಾಗಿದ್ದೇಕೆ? ಮನವಿಯಲ್ಲಿ ಏನಿದೆ?
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ದೂರಶಿಕ್ಷಣದ ಮೂಲಕ ನಡೆಸುತ್ತಿರುವ ಕೋರ್ಸುಗಳಿಗೆ ಅನುಮತಿ ರದ್ದುಗೊಳಿಸುವ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಲಾಯಿತು.
ಯು.ಜಿ.ಸಿ ಮಾನ್ಯತೆಯಂತೆ ಶಿಕ್ಷಣ
NIRF ಶ್ರೇಣಿಯಲ್ಲಿ ಮೊದಲ ನೂರು ಸ್ಥಾನ ಗಳಿಸಿರುವ ವಿಶ್ವವಿದ್ಯಾಲಯಗಳಿಗೆ ದೂರ ಶಿಕ್ಷಣ ಮತ್ತು ಆನ್ ಲೈನ್ ಕೋರ್ಸುಗಳ ಆರಂಭಕ್ಕೆ ಅನುಮತಿ ನೀಡಲು ಕೇಂದ್ರದ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಘೋಷಿಸಿದ್ದಾರೆ. ಮತ್ತೊಂದೆಡೆ ವಿಶ್ವವಿದ್ಯಾಲಯದ ಧನಸಹಾಯ ಆಯೋಗವು ಅನುಷ್ಠಾನಗೊಳಿಸಿರುವ ಎಲ್ಲಾ ಮಾರ್ಗಸೂಚಿ, ಮಾನದಂಡಗಳನ್ನು ಕುವೆಂಪು ವಿವಿ ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ವಿ.ವೀರಭದ್ರಪ್ಪ, ಕುಲಸಚಿವ ಪ್ರೊ.ಎಸ್.ಎಸ್.ಪಾಟಿಲ್, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಹೆಚ್.ಬಿ.ರಮೇಶ್ ಬಾಬು, ರಾಮಲಿಂಗಪ್ಪ, ಎಸ್.ಆರ್.ನಾಗರಾಜ್, ಕುವೆಂಪು ವಿವಿ ದುರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ಜೆ.ನಾರಾಯಣ್ ಸೇರಿದಂತೆ ಹಲವರಿದ್ದರು.
ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ್, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422