ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
EDUCATION NEWS, 26 OCTOBER 2024 : ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ (Extend) ಮಾಡಲಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವಾಗ ಕೊನೆ ದಿನಾಂಕ? Extend
ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕ ಎಂದು ನಿಗದಿಯಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ.5 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿದಾರರು ನ.6 ರ ಒಳಗೆ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ನೀಡಬೇಕು.
ಇದನ್ನೂ ಓದಿ » ಕುವೆಂಪು ವಿವಿ ಸಿಂಡಿಕೇಟ್‌ಗೆ ಆರು ಸದಸ್ಯರ ನಾಮನಿರ್ದೇಶನ, ಯಾರನ್ನೆಲ್ಲ ನೇಮಿಸಲಾಗಿದೆ?
ಅರ್ಜಿ ಶುಲ್ಕ ಎಷ್ಟು?
ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓ.ಬಿ.ಸಿ ವರ್ಗದ ಅಭ್ಯರ್ಥಿಗಳಿಗೆ 350 ರೂ., ಎಸ್.ಸಿ, ಎಸ್.ಟಿ, ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 175 ರೂ. ನಿಗದಿಪಡಿಸಲಾಗಿದೆ. ಹಣವನ್ನು ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ ಪದನಾಮದಲ್ಲಿ ಚಲನ್ ಮೂಲಕ ಖಾತೆ ಸಂಖ್ಯೆ 54023036291 ಐಎಫ್‌ಎಸ್‌ಸಿ ಕೋಡ್ SBIN0040759 ಗೆ ಜಮಾ ಮಾಡಬೇಕು ಎಂದು ಕುಲಸಚಿವರು ತಿಳಿಸಿದ್ದಾರೆ.