ಮಹಿಳಾ ವಸತಿ ಪಾಲಿಟೆಕ್ನಿಕ್‌ನಲ್ಲಿ ಲ್ಯಾಟರಲ್‌ ಎಂಟ್ರಿ, ಯಾವೆಲ್ಲ ಕೋರ್ಸ್‌? ಎಷ್ಟು ಸೀಟುಗಳಿವೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಐ.ಟಿ.ಐ ಅಥವಾ ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಡಿಪ್ಲೊಮಾ 2 ಮತ್ತು 3ನೇ ವರ್ಷದ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಮೆರಿಟ್ ಹಾಗೂ ರೋಸ್ಟರ್‌ ಅನುಗುಣವಾಗಿ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದೆ. ಉಳಿದಿರುವ ಸೀಟುಗಳ ಹಂಚಿಕೆಗಾಗಿ ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿದೆ.

Government-Residential-polytechnic-college

ಯಾವೆಲ್ಲ ಕೋರ್ಸ್‌? ಎಷ್ಟು ಸೀಟ್‌ಗಳಿವೆ?

  • ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್: 02
  • ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ): 03
  • ಕಮರ್ಷಿಯಲ್ ಪ್ರಾಕ್ಟಿಸ್ (ಇಂಗ್ಲಿಷ್): 03
  • ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ: 06

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಎನ್‌ಓಸಿ, 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ (ಬಿಇಒ ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ 6 ಭಾವಚಿತ್ರಗಳನ್ನು ಸಲ್ಲಿಸಬೇಕು.

ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಸೂಚನೆಯಂತೆ ರವಿನಾಯಕ್ ಡಿ. ಅವರನ್ನು ಮೊಬೈಲ್ ಸಂಖ್ಯೆ: 9886610245 ಮೂಲಕ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.