ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 JANUARY 2023
ಅಥ್ಲೆಟಿಕ್ಸ್ನಲ್ಲಿ ಪ್ರಜ್ಞಾ ಸಾಧನೆ
SHIMOGA : ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದ 400 ಮೀಟರ್ ಹರ್ಡಲ್ಸ್ನಲ್ಲಿ ಶಿವಮೊಗ್ಗ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿನಿ ಕೆ.ಪ್ರಜ್ಞಾ ಐದನೇ ಸ್ಥಾನ ಪಡೆದಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಪ್ರಜ್ಞಾಳ ಸಾಧನೆಗೆ ಕಾಲೇಜು ಪ್ರಾಂಶುಪಾಲರಾದ ಡಾ. ಎ.ಅನಲ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಾಂತರಾಜ್, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ
AYANURU : ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜ.4ರ ಬೆಳಿಗ್ಗೆ 10.30ಕ್ಕೆ ಪ್ರಸಕ್ತ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ. 4ರಂದು ಬೆಳಿಗ್ಗೆ 10.30ಕ್ಕೆ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.
ಇದನ್ನೂ ಓದಿ – ದುರ್ಗಿಗುಡಿ ಕನ್ನಡ ಸಂಘ ಆಕ್ರೋಶ | ಶಿವರಾಜ್ ಕುಮಾರ್ ಸಿನಿಮಾ ಹಾಡುಗಳ ಕಾರ್ಯಕ್ರಮ – ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422