PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ದ್ವಿತೀಯ ಪಿಯುಸಿ ಫಲಿತಾಂಶ (PU Result) ಪ್ರಕಟವಾಗಿದೆ. ಮಧ್ಯಾಹ್ನವೆ ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಿದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಶಿವಮೊಗ್ಗದ ಪೇಸ್‌ ಪಿ.ಯು. ಕಾಲೇಜು ವಿದ್ಯಾರ್ಥಿನಿ ಮಹೀನ್‌ ಖಾನಮ್‌ ಅಫ್ರಿದಿ 600 ಅಂಕಗಳಿಗೆ 596 ಅಂಕ ಗಳಿಸಿದ್ದಾರೆ.

ಈ ಸಂಬಂಧ ಪೇಸ್‌ ಕಾಲೇಜು ಆಡಳಿತ ಮಂಡಳಿ ಪ್ರಕಟಣೆ ನೀಡಿದ್ದು, ಮಹೀನ್‌ ಖಾನಮ್‌ ಅಫ್ರಿದಿ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು, ಮಹೀನ್‌ ಖಾನಮ್‌ ಅವರ ಮನೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಪೋಷಕರು, ಸಂಬಂಧಿಕರು, ಸ್ನೇಹಿತರು ಮಹೀನ್‌ ಖಾನಮ್‌ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Shimoga-PU-Result-MAHIN-KHANUM-AFRIDI-scores-596-marks

ವಿಕಾಸ ವಿದ್ಯಾ ಸಂಸ್ಥೆಯ ರಂಜಿತಾ.ಜಿ ಅವರು ವಾಣಿಜ್ಯ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment