ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021
ಖೇಲೋ ಇಂಡಿಯಾ ಯೋಜನೆ ಅಡಿ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ (ಎಸ್‍ಟಿಸಿ) ಸ್ಥಾಪನೆ ಮಾಡಲಾಗುತ್ತಿದೆ. ಈ ಸಂಬಂಧ ಇವತ್ತು ಉಪನ್ಯಾಸಕರ ಸಭೆ ಆಯೋಜಿಸಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಕುಲಸಚಿವ ಎಸ್.ಎಸ್.ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಒಳಾಂಗಣದಲ್ಲಿ ಸಭೆ ನಡೆಸಲಾಗುತ್ತಿದ್ದು, ಐವತ್ತಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಕೋವಿಡ್ ನಿಯಮದ ಉಲ್ಲಂಘನೆಯಾಗಿದೆ.
ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರುಗಳು, ಉಪನ್ಯಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಮದುವೆಯಲ್ಲಿ ಐವತ್ತು ಮಂದಿ, ಅಂತ್ಯಕ್ರಿಯೆಯಲ್ಲಿ ಐವರು ಮಾತ್ರ ಪಾಲ್ಗೊಳ್ಳಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಅಗತ್ಯ ವಸ್ತುಗಳ ಹೊರತು ಉಳಿದ್ಯಾವ ಅಂಗಡಿಗಳ ಬಾಗಿಲು ತೆಗೆಯಬಾರದು ಎಂದು ಸೂಚಿಸಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಕುವೆಂಪು ವಿವಿ ಕುಲಪತಿ, ಕುಲಸಚಿವರ ನೇತೃತ್ವದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಸಭೆ ನಡೆಸಿರುವುದು ಪ್ರಶ್ನಾರ್ಹವಾಗಿದೆ.
ಸಭೆಯ ವಿಡಿಯೋ ವರದಿ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]