ಕುವೆಂಪು ವಿಶ್ವವಿದ್ಯಾಲಯ ಬಂದ್‌ ಮಾಡುವ ಎಚ್ಚರಿಕೆ, ಕುಲಪತಿಗೆ 2 ಬೇಡಿಕೆ ಸಲ್ಲಿಕೆ, ಏನೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 8 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHANKARAGATTA : ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕುವೆಂಪು ವಿಶ್ವವಿದ್ಯಾಲಯ ಬಂದ್‌ ಮಾಡಿ ಪ್ರತಿಭಟನೆ ನಡೆಸುವುದಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್‌ (ಎನ್‌ಎಸ್‌ಯುಐ) ಎಚ್ಚರಿಸಿದೆ. ಈ ಸಂಬಂಧ ಕುವೆಂಪು ವಿವಿ ಕಲುಪತಿಗೆ ಮನವಿ ಸಲ್ಲಿಸಿದೆ.

ಎರಡು ಪ್ರಮುಖ ಬೇಡಿಕೆಗಳು

ಬೇಡಿಕೆ 1 : ಉಳಿಕೆ ಸೀಟು ಹಂಚಿಕೆ ಮಾಡಿ

point-1ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶ ಮುಕ್ತಾಯವಾಗಿದೆ. ವಿವಿಧ ಕೋರ್ಸುಗಳಿಗೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಕೋಟಾದಡಿ ಮೀಸಲಾಗಿದ್ದ ಸೀಟುಗಳು ಸಂಪೂರ್ಣ ಭರ್ತಿಯಾಗಿಲ್ಲ. ಹಾಗಾಗಿ ಖಾಲಿ ಉಳಿದಿರುವ ಸೀಟುಗಳನ್ನು ಇತರೆ ವರ್ಗದ ಆಕಾಂಕ್ಷಿಗಳಿಗೆ ಹಂಚಿಕೆ ಮಾಡಬೇಕು. ಇದಕ್ಕಾಗಿ ಮತ್ತೊಮ್ಮೆ ಕೌನ್ಸಿಲಿಂಗ್‌ ನಡೆಸಬೇಕು.

ಬೇಡಿಕೆ 2 : ಅತಿಥಿ ಉಪನ್ಯಾಸಕರನ್ನು ನೇಮಿಸಿ

point-2ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ಕಾಲೇಜು ಆರಂಭವಾಗುವ ಮೊದಲೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿತ್ತು. ಆದರೆ ಈ ಬಾರಿ ಸೆಮಿಸ್ಟರ್‌ ಮುಕ್ತಾಯ ಹಂತಕ್ಕೆ ಬಂದಿದ್ದರು ನೇಮಕಾತಿ ಆಗಿಲ್ಲ. ಇದರಿಂದ ಪಾಠಗಳು ಮುಗಿಯದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣ ಎಲ್ಲ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು.

ತಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಬಂದ್‌ ಮಾಡಿ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಎಚ್ಚರಿಸಿದರು. ಜಿಲ್ಲಾಧ್ಯಕ್ಷ ವಿಜಯ್‌ ಕುಮಾರ್‌, ಪ್ರಮುಖರಾದ ಹರ್ಷಿತ್‌, ಮುರುಗೇಶ್‌, ನಿಖಿಲ್‌ ಕೀರ್ತಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಗಾಜನೂರು ಶಾಲೆಗೆ ಹಣ್ಣು ಸಾಗಿಸುತ್ತಿದ್ದ ಗೂಡ್ಸ್‌ ಗಾಡಿಗೆ ಕಾರು ಡಿಕ್ಕಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment