ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಹಾಗೂ ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 38 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮೀರಬಾರದು. ವಿದ್ಯಾರ್ಥಿಗಳು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇ.50ರಷ್ಟು ಅಂಕ ಪಡೆದಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಸಕ್ರಿಯವಾಗಿರಬೇಕು. ಲಭ್ಯವಿರುವ ಅನುದಾನದ ಆಧಾರದಲ್ಲಿ ಮೆರಿಟ್ ಪ್ರಕಾರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು https://sevaone.karnataka.gov.in ಲಿಂಕ್ ಮೂಲಕ ಡಿಸೆಂಬರ್ 31 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ 08182-220206, ವೆಬ್‌ಸೈಟ್ https://dom.karnataka.gov.in ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.