ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 FEBRUARY 2024
SHANKARAGHATTA : ಮೂರು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ನೌಕರರು ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ನೆವಂಬರ್ ತಿಂಗಳಿಂದ ನೌಕರರಿಗೆ ವೇತನ ಬಾಕಿ ಇದೆ.
ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಏಜೆನ್ಸಿ ಮೂಲಕ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಈ ನೌಕರರಿಗೆ ತಡವಾಗಿ ವೇತನ ಪಾವತಿಸಲಾಗುತ್ತಿದೆ. ಈ ಹಿನ್ನೆಲೆ ಕಳೆದ ತಿಂಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಮುಂದಾಗಿದ್ದರು. ಆಗ ಅಕ್ಟೋಬರ್ ತಿಂಗಳ ವೇತನ ಪಾತಿಸಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ವೇತನ ಇಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ. ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳ ವೇತನ ಬಾಕಿ ಇದೆ. ಮೂರು ತಿಂಗಳ ಸಂಬಳ ಒಟ್ಟಿಗೆ ನೀಡಬೇಕು. ಅಲ್ಲಿಯವರೆಗೆ ಮುಷ್ಕರ ಮುಂದುವರೆಸುವುದಾಗಿ ಹೊರಗುತ್ತಿಗೆ ನೌಕರರ ಸಂಘದ ಎಚ್ಚರಿಸಿದೆ.
ಇದನ್ನೂ ಓದಿ – ಅಡಿಕೆ ಲೋಡ್ ಲಾರಿ ವಶಕ್ಕೆ, ಬೆನ್ನಟ್ಟಿ ಹಿಡಿದ ಕಸ್ಟಮ್ಸ್ ಅಧಿಕಾರಿಗಳ ಪಡೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422