ಸೊರಬದ ಸಚಿನ್‌ಗೆ ಕುವೆಂಪು ವಿವಿಯಿಂದ ಪಿಹೆಚ್‌ಡಿ ಪದವಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎನ್.ಜೆ. ಸಚಿನ್ ಅವರಿಗೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಘೋಷಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ವಿಭಾಗದ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಚಿನ್ ಅವರು ಮಂಡಿಸಿದ ‘ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಈ ಪದವಿ ಲಭಿಸಿದೆ.

PHD-for-Kuvempu-University-Journalism-student-Sachin

ಎನ್.ಜೆ.ಸಚಿನ್‌ ಅವರು ಸೊರಬ ತಾಲೂಕಿನ ನೆಗವಾಡಿ ಗ್ರಾಮದ ಜಯಪ್ಪ ಮತ್ತು ಸುಜಾತ ದಂಪತಿಯ ಪುತ್ರ. ಸದ್ಯ ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ (ಸ್ವಾಯತ್ತ) ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!