ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಗುರುವಾರ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರೊ. ಕೆ.ಆರ್. ಮಂಜುನಾಥ್ ಅವರು ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಜಗನ್ನಾಥ ಡಾಂಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಎಂ.ಆರ್. ಸತ್ಯಪ್ರಕಾಶ್, ವಾಣಿಜ್ಯ ನಿಕಾಯದ ಡೀನ್ ಪ್ರೊ. ಹೆಚ್.ಎನ್. ರಮೇಶ್, ಉಪಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಜರಿದ್ದರು.
