ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಆಹ್ವಾನಿಸಲಾಗಿದ್ದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್ಸೈಟ್ https://ssp.postmatric.karnataka.gov.in ಮೂಲಕ ಅಕ್ಟೋಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಗಳ ವಿವರ, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ bcwd.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770004, ಇ-ಮೇಲ್: bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.